ಹೊಸದಿಲ್ಲಿ: ದೆಹಲಿ ವಿಧಾನಸಭೆ ಚುನಾವಣೆ ಮತದಾನ ಮುಗಿದಿದ್ದು, ಶೇ. 57.86 ರಷ್ಟು ಮತದಾನ ನಡೆದಿದೆ.
ದೆಹಲಿಯ 70 ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಬೆಳಗ್ಗೆ 7 ಗಂಟೆಯಿAದ ಸಂಜೆ 6 ಗಂಟೆವರೆಗೆ ಮತದಾನ ನಡೆದಿತ್ತು. ಅನೇಕ ಘಟಾನುಘಟಿ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದರು.
ಕರೋಲಾಬಾಗ್ ಕ್ಷೇತ್ರದಲ್ಲಿ ಅತಿ ಕಡಿಮೆ ಅಂದರೆ ಶೇ. 47.4 ಮತದಾನ ದಾಖಲಾಗಿದ್ದು, ಮುಸ್ತಫಾಬಾದ್‌ನಲ್ಲಿ ಅತಿಹೆಚ್ಚು ಅಂದರೆ ಶೇ. 66.68 ರಷ್ಟು ಮತದಾನ ದಾಖಲಾಗಿದೆ.
ರಾಷ್ಟçಪತಿ ದ್ರೌಪದಿ ಮುರ್ಮು, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಅರವಿಂದ ಕೇಜ್ರೀವಾಲ್ ಸೇರಿದಂತೆ ಪ್ರಮುಖ ಗಣ್ಯರು ಮತದಾನ ಮಾಡಿದ್ದಾರೆ.