ಬೇಲೂರು: ಪಾಳುಬಿದ್ದ ಕಟ್ಟಡವೊಂದು ಕುಸಿದುಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಕೆಲವರು ಗಾಯಗೊಂಡಿರುವ ಘಟನೆ ಬೇಲೂರು ಪಟ್ಟಣದಲ್ಲಿ ನಡೆದಿದೆ.
ಹಾಸನ ಜಿಲ್ಲೆ ಬೇಲೂರು ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಪಾಳುಬಿದ್ದಿದ್ದ ಕಟ್ಟಡವೊಂದು ಕುಸಿದು ಬಿದ್ದಿದೆ. ಪಾಳುಬಿದ್ದ ಕಟ್ಟಡದ ಕೆಳಗೆ ವ್ಯಾಪಾರ ಮಾಡುತ್ತಿದ್ದ ಮಹಿಳೆಯರು ಮೃತಪಟ್ಟಿದ್ದಾರೆ.
ಪಟ್ಟಣದ ಸತ್ಯನಾರಾಯಣ ಗೌಡ ಬಿಲ್ಡಿಂಗ್ ಕೆಳದಿನಗಳಿಂದ ಪಾಳುಬಿದ್ದಿತ್ತು. ಈ ಕಟ್ಟಡದ ಕೆಳಗೆ ವೃದ್ಧ ಮಹಿಳೆಯರಿಬ್ಬರು ಹಣ್ಣಿನ ವ್ಯಾಪಾರ ಮಾಡಿಕೊಂಡಿದ್ದರು ಎನ್ನಲಾಗಿದೆ. ಆ ಮಹಿಳೆಯರು ಸೇರಿ ನಾಲ್ವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಪುರಸಭೆ ಮೊದಲೇ ಪಾಳುಬಿದ್ದಿದ್ದ ಕಟ್ಟಡಕ್ಕೆ ನೊಟೀಸ್ ಕೊಡದೆ ನಿರ್ಲಕ್ಷö್ಯ ವಹಿಸಿದ್ದೆ ಘಟನೆಗೆ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೃತರು ಬಹಳ ಬಡವರಾಗಿದ್ದು, ಅವರಿಗೆ ಸೂಕ್ತ ಪರಿಹಾರ ನೀಡುವಂತೆ ಸರಕಾರಕ್ಕೆ ಒತ್ತಾಯಿಸಿದ್ದಾರೆ.