ಅಪರಾಧ ರಾಜಕೀಯ ಸುದ್ದಿ

ಮೈಕ್ರೋ ಫೈನಾನ್ಸ್ ದಂಧೆ : ಕಾನೂನು ಕ್ರಮದ ಎಚ್ಚರಿಕೆ ನೀಡಿದ ಸಿಎಂ

Share It

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ದಂಧೆ ಹೆಚ್ಚಾಗಿದ್ದು, ಇವರಿಂದ ನಿತ್ಯ ಸಾರ್ವಜನಿಕರಿಗೆ ಕಿರುಕುಳವಾಗುತ್ತಿದೆ. ಇದಕ್ಕೆ ಕಾನೂನು ಕ್ರಮ ತೆಗೆದುಕೊಳ್ಳಲು ಸರಕಾರ ತೀರ್ಮಾನಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರು, ಚಾಮರಾಜನಗರ ಜಿಲ್ಲೆಗಳ ಗ್ರಾಮೀಣ ಭಾಗದಲ್ಲಿ ಮೈಕ್ರೋ ಫೈನಾನ್ಸ್ ದಂಧೆ ಹೆಚ್ಚಿದ್ದು, ಜನರಿಗೆ ಕಿರುಕುಳ ನೀಡುತ್ತಿರುವ ಬಗ್ಗೆ ದೂರುಗಳು ಬಂದಿವೆ. ಜನರಿಗೆ ಕಿರುಕುಳ ನೀಡುವ ಮೈಕ್ರೋ ಫೈನಾನ್ಸ್ ದಂಧೆ ನಡೆಸುತ್ತಿರುವ ಸಂಸ್ಥೆಯ ವಿರುದ್ಧ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಕೆಲವರು ಗ್ರಾಮ ತೊರೆಯುತ್ತಿದ್ದಾರೆ, ಮತ್ತೇ ಕೆಲವರು ಆತ್ಮಹತ್ಯೆಗೆ ಯತ್ನಿಸಿರುವ ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಎಲ್ಲ ಹಿನ್ನೆಲೆಯಲ್ಲಿ ಸರಕಾರ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ಕ್ರಮಕ್ಕೆ ಮುಂದಾಗಿದೆ.


Share It

You cannot copy content of this page