ಕಟಕ್: ಇಂಗ್ಲೆಂಡ್ ಮತ್ತು ಭಾರತ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ನಾಲ್ಕು ವಿಕೆಟ್ಗಳ ಜಯಗಳಿಸುವ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ 2-0 ಯಲ್ಲಿ ವಿಜಯ ಗಳಿಸಿದೆ.
ಕಟಕ್ನಲ್ಲಿ ನಡೆದ ಪಂದ್ಯದಲ್ಲಿ ಇಂಗ್ಲೆಂಡ್ ಮೊದಲು ಬ್ಯಾಟ್ ಮಾಡಿ 304 ರನ್ಗಳ ಬೃಹತ್ ಮೊತ್ತವನ್ನು ಪೇರಿಸಿತು. ಇಂಗ್ಲೆಂಡ್ ಪರ ಜೋ ರೂಟ್ ಮತ್ತು ಡಕೆಟ್ ತಲಾ ಅರ್ಧಶತಕ ಗಳಿಸಿ ಮಿಂಚಿದರು.
ಭಾರತದ ಪರ ಬೌಲಿಂಗ್ನಲ್ಲಿ ರವೀಂದ್ರ ಜಡೇಜಾ 3 ವಿಕೆಟ್ ಪಡೆದರು.
ಭಾರತದ ಪರ ಬ್ಯಾಟಿಂಗ್ ಆರಂಭಿಸಿದ ನಾಯಕ ರೋಹಿತ್ ಶರ್ಮಾ ಮತ್ತು ಶುಬಮನ್ ಗಿಲ್ ಉತ್ತಮ ಆರಂಭ ಮಾಡಿದರು. ಗಿಲ್ 60 ರನ್ಗಳಿಸಿ ಔಟಾದರೆ, ನಾಯಕ ರೋಹಿತ್ 90 ಎಸೆತಗಳಲ್ಲಿ ಭರ್ಜರಿ 119 ರನ್ ಗಳಿಸಿದರು.
ಅನಂತರ ಮಧ್ಯಮ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಮತ್ತು ಅಕ್ಷರ್ ಪಟೇಲ್ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಶ್ರೇಯಸ್ 44 ಮತ್ತು ಅಕ್ಷರ್ ಪಟೇಲ್ ಔಟಾಗದೆ 41 ರನ್ಗಳಿಸಿ ಗೆಲುವು ತಂದುಕೊಟ್ಟರು