ಉಪಯುಕ್ತ ಸುದ್ದಿ

ಮಹದಾಯಿ ಜಲವಿವಾದ: ನ್ಯಾಯಮಂಡಳಿ ಅವಧಿ ಪುನಃ ವಿಸ್ತರಣೆ

Share It

ನವದೆಹಲಿ: ಮಹದಾಯಿ ಜಲವಿವಾದಕ್ಕೆಸಂಬಂಧಿಸಿ ಹೆಚ್ಚಿನ ವರದಿ ಸಲ್ಲಿಸುವ ಸಂಬಂಧ ನ್ಯಾಯಮಂಡಳಿಯ ಅವಧಿಯನ್ನು ಪುನಃ ಆರು ತಿಂಗಳು ವಿಸ್ತರಿಸಲಾಗಿದೆ.

ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ನಡುವಿನ ನೀರು ಹಂಚಿಕೆ ವಿವಾದಗಳನ್ನು ಪರಿಹರಿಸಲು ಈ ನ್ಯಾಯಮಂಡಳಿ ಸ್ಥಾಪಿಸಲಾಗಿದೆ. ನ್ಯಾಯಮಂಡಳಿಗೆ ಕರ್ನಾಟಕ ಹಾಗೂ ಗೋವಾ ಸರ್ಕಾರಗಳು ಸ್ಪಷ್ಟಿಕರಣ ಅರ್ಜಿ ಸಲ್ಲಿಸಿವೆ. ಹೀಗಾಗಿ, ಹೆಚ್ಚಿನ ವರದಿ ನೀಡಲು ಇನ್ನಷ್ಟು ಕಾಲಾವಕಾಶ ನೀಡಬೇಕು ಎಂದು ಜಲಶಕ್ತಿ ಸಚಿವಾಲಯವನ್ನು ನ್ಯಾಯಮಂಡಳಿ ಕೋರಿತ್ತು. ವರದಿ ನೀಡುವ ಅವಧಿಯನ್ನು ವಿಸ್ತರಿಸಿ ಸಚಿವಾಲಯ ಮಂಗಳವಾರ ಅಧಿಸೂಚನೆ ಹೊರಡಿಸಿದೆ.

ಮಹದಾಯಿ ವಿವಾದ ಬಗೆಹರಿಸಲು ಅಂತರ ರಾಜ್ಯ ನದಿ ನೀರು ವಿವಾದ ಕಾಯ್ದೆ 1956ರ ಸೆಕ್ಷನ್ 4ರ ಅನ್ವಯ ಮಹದಾಯಿ ನ್ಯಾಯಮಂಡಳಿ ಸ್ಥಾಪಿಸಲಾಗಿತ್ತು. ಸುಪ್ರೀಂ ಕೋರ್ಟ್ ಆದೇಶದ ಅನುಸಾರ ನ್ಯಾಯಮಂಡಳಿಯು 2018ರ ಆಗಸ್ಟ್‌ನಲ್ಲಿ ವರದಿ ಸಲ್ಲಿಸಿದೆ. ಈ ವರದಿಯ ಬಗ್ಗೆ 2020ರ ಫೆ.20ರಂದು ಅಧಿಸೂಚನೆ ಹೊರಡಿಸಲಾಗಿದೆ. ಹೆಚ್ಚುವರಿ ವರದಿ ನೀಡಲು ನ್ಯಾಯಮಂಡಳಿಯ ಅವಧಿ ವಿಸ್ತರಿಸುತ್ತಿರುವುದು ಇದು ಐದನೇ ಬಾರಿ. ವರದಿ ನೀಡಲು ಇನ್ನೂ ಒಂದು ವರ್ಷ ಕಾಲಾವಕಾಶ ನೀಡಬೇಕು ಎಂದು ನ್ಯಾಯಮಂಡಳಿಯು ಜಲಶಕ್ತಿ ಸಚಿವಾಲಯಕ್ಕೆ ಪ್ರಸ್ತಾವ ಸಲ್ಲಿಸಿತ್ತು.


Share It

You cannot copy content of this page