ಬೆಂಗಳೂರು: ಕರ್ನಾಟಕ, ತಮಿಳುನಾಡು ವಿರೋಧಿಸುತ್ತಲೇ ಬಂದಿರುವ ತ್ರಿಭಾಷಾ ಸೂತ್ರಕ್ಕೆ ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ ಬೆಂಬಲ ಸೂಚಿಸುವ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಕರ್ನಾಟಕ ತ್ರಿಭಾಷಾ ಸೂತ್ರವನ್ನು ಮೊದಲಿನಿಂದಲೂ ವಿರೋಧಿಸುತ್ತಲೇ ಬಂದಿದೆ. ಇದೀಗ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ತ್ರಿಭಾಷಾ ಸೂತ್ರ ಪರಿಣಾಮಕಾರಿಯಾಗಿ ಜಾರಿಗೆ ತರಲು ಕೇಂದ್ರ ಸರಕಾರ ಪ್ರಯತ್ನ ಮಾಡುತ್ತಿದೆ. ಇದನ್ನು ತಮಿಳುನಾಡು ಸೇರಿದಂತೆ ಅನೇಕ ರಾಜ್ಯಗಳು ವಿರೋಧಿಸಿವೆ.
ಕರ್ನಾಟಕದಲ್ಲಿಯೂ ತ್ರಿಭಾಷಾ ಸೂತ್ರದ ಬಗ್ಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಹೋರಾಟಕ್ಕೆ ಬೆಂಬಲ ಸೂಚಿಸುವಂತೆ ಮನವಿ ಮಾಡಿದ್ದಾರೆ. ಈ ನಡುವೆ ಸುಧಾಮೂರ್ತಿ ಅವರ ಈ ನಡೆ ಇದೀಗ ಕರ್ನಾಟಕದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.
ಒಬ್ಬರು ಬಹುಭಾಷೆಗಳನ್ನು ಕಲಿಯಬಹುದು, ನನಗೆ 7-8 ಭಾಷೆಗಳು ತಿಳಿದಿವೆ. ನಾನು ಇದನ್ನು ಆನಂಧಿಸುತ್ತೇನೆ. ಇದರಿಂದ ಮಕ್ಕಳಿಗೆ ಹೆಚ್ಚಿನ ಲಾಭವೂ ಇದೆ ಎಂದು ಸುಧಾಮೂರ್ತಿ ಹೇಳಿಕೆ ನೀಡಿದ್ದಾರೆ.
ತ್ರಿಭಾಷಾ ಸೂತ್ರಕ್ಕೆ ಕಾಂಗ್ರೆಸ್‌ನ ಕಾರ್ತಿ ಚಿದಂಬರಂ, ತಮಿಳುನಾಡು ತಮಿಳು ಮತ್ತು ಇಂಗ್ಲೀಷ್ ಮಾತ್ರವನ್ನೇ ಬಳಕೆ ಮಾಡಿಕೊಂಡು ಆಡಳಿತ ನಡೆಸುತ್ತಿರುವ ರಾಜ್ಯ. ಇದರಿಂದ ವಾಣಿಜ್ಯ ಮತ್ತು ವಿಜ್ಞಾನ ಪ್ರಪಂಚದ ಜತೆಗೆ ತನ್ನ ಸಂಬಂಧವನ್ನು ಗಟ್ಟಿಗೊಳಿಸಿಕೊಂಡೇ ಬರುತ್ತಿದೆ. ಜತೆಗೆ ತನ್ನ ಸ್ಥಳೀಯ ಸಂಸ್ಕೃತಿಯನ್ನು ಉಳಿಸಿಕೊಂಡು ಬರುವಲ್ಲಿ ಯಶಸ್ವಿಯಾಗಿದೆ. ಈ ಹಿನ್ನೆಲೆಯಲ್ಲಿ ದ್ವಿಭಾಷಾ ನೀತಿಯೇ ಮುಂದುವರಿದರೆ ಉತ್ತಮ ಎಂದು ಒತ್ತಾಯಿಸಿದರು.