ಬೆಂಗಳೂರು : ಸದ್ಯ ಕರ್ನಾಟಕದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧವಿದ್ದರೂ ಸಂಪೂರ್ಣವಾಗಿ ನಿಷೇಧಿಸುವುದು ಕಷ್ಟ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ವಿಧಾನಪರಿಷತ್‌ಗೆ ತಿಳಿಸಿದ್ದಾರೆ.
2025-26ನೇ ಸಾಲಿನ ಬಜೆಟ್ ಅಂದಾಜುಗಳ ಮೇಲಿನ ಚರ್ಚೆಯ ವೇಳೆ ಮಧ್ಯಪ್ರವೇಶಿಸಿದ ಅವರು, ಪ್ಲಾಸ್ಟಿಕ್ ಉತ್ಪನ್ನಗಳ ಬಳಕೆ ನಿಷೇಧವಿದೆ. ಬಳಸುವವರಿಗೆ ಮತ್ತು ನಿಷೇದಿತ ಪ್ಲಾಸ್ಟಿಕ್ ಉತ್ಪಾದಿಸುವವರಿಗೆ ದಂಡ ಹಾಕುತ್ತಿದ್ದೇವೆ ಎಂದರು.
ಪ್ಲಾಸ್ಟಿಕ್ ಲೋಟ, ತಟ್ಟೆ, ಹಾರ ಇತ್ಯಾದಿಗಳು ಬಳಕೆಯಾಗುತ್ತಿವೆ. ಇದನ್ನು ನಿಷೇಧಿಸಲಾಗಿದೆ. ಆದರೂ ಒಂದಲ್ಲ ಒಂದು ರೀತಿಯಲ್ಲಿ ಪ್ಲಾಸ್ಟಿಕ್ ಬಳಕೆಯಲ್ಲಿವೆ. ಹೀಗಾಗಿ ಇದನ್ನು ಸಂಪೂರ್ಣವಾಗಿ ನಿಷೇಧ ಮಾಡಲು ಕಷ್ಟ ಸಾಧ್ಯ ಎಂದು ಸಚಿವ ಸಿ.ಸುಧಾಕರ್ ಅಭಿಪ್ರಾಯಪಟ್ಟರು.