ಬೆಂಗಳೂರು: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರೊಂದಕ್ಕೆ ಏಕಾಏಕಿ ಬೆಂಕಿ ತಗುಲಿದ್ದು, ಅಕ್ಕಪಕ್ಕದ ಬೈಕ್‌ಗಳಿಗೆ ಬೆಂಕಿ ಆವರಸಿ ಆತಂಕ ಸೃಷ್ಟಿಸಿದ ಘಟನೆ ರಾಜಧಾನಿಯಲ್ಲಿ ನಡೆದಿದೆ.
ಲಾಲ್‌ಬಾಗ್ ಮೆಟ್ರೋ ನಿಲ್ದಾಣದ ಸಮೀಪದಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿತು. ಬೆಂಕಿ ನೋಡುನೋಡುತ್ತಿದ್ದಂತೆ ಅಕ್ಕಪಕ್ಕದಲ್ಲಿದ್ದ ಬೈಕ್‌ಗಳಿಗೆ ಆವರಿಸಿತು. ಬೆಂಕಿ ನಂದಿಸಲು ಕೆಲವು ಸ್ಥಳೀಯರು ಪ್ರಯತ್ನ ಪಟ್ಟರಾದರೂ ಸಾಧ್ಯವಾಗಲಿಲ್ಲ.
ಅಷ್ಟರಲ್ಲಿ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ಕಾರು ಮತ್ತು ಬೈಕ್‌ಗೆ ಹೊತ್ತಿದ್ದ ಬೆಂಕಿಯನ್ನು ನಂದಿಸಿದರು. ಬಸವನಗುಡಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ. ತಾಂತ್ರಿಕ ಕಾರಣಗಳಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಮೇಲ್ನೋಟಕ್ಕೆ ಕಂಡುಬAದಿದೆ.