ಅಥಣಿ: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೆಳಗಾವಿ ಜಿಲ್ಲೆಯ ಅಥಣಿಯ ಹಾರೋಗೇರಿ ವ್ಯಾಪ್ತಿಯಲ್ಲಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ರೈತ ಶಿವನಪ್ಪ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವನಪ್ಪ ಅವರ ಮಡದಿ ಹೆಸರಿನಲ್ಲಿ ವಿವಿಧ ಮೈಕ್ರೋ ಫೈನಾನ್ಸ್ ಸಂಸ್ಥೆಗಳಲ್ಲಿ ಸುಮಾರು 10 ಲಕ್ಷ ಸಾಲ ಮಾಡಿದ್ದರು. ಸಾಲ ಕಟ್ಟುವಂತೆ ಫೈನಾನ್ಸ್ ಸಿಬ್ಬಂದಿ ಟಾರ್ಚರ್ ಕೊಡುತ್ತಿದ್ದರು ಎನ್ನಲಾಗಿದೆ.
ಶಿವನಪ್ಪನಿಗೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಫೋನ್ ಮಾಡಿ ಕಿರುಕುಳ ನಿಡುವುದು ಹಾಗೂ ಮನೆಯ ಬಳಿಗೆ ಬಂದು ಚಿತ್ರಹಿಂಸೆ ಕೊಡುತ್ತಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಶಿವನಪ್ಪ ವಿಷಸೇವನೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೈಕ್ರೋ ಫೈನಾನ್ಸ್ ಸಿಬ್ಬಂದಿಯ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಕುಟುಂಬಸ್ಥರು ಮತ್ತು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.