ವಿಜಯಪುರ: ಸರಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನಲ್ಲಿ ಸರಕಾರಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದೆ. ಬೈಕ್ ನಲ್ಲಿ ತೆರಳುತ್ತಿದ್ದ ಸಾಗರ್ ಬೈಚನಾಳ್ ಹಾಗೂ ಆತನ ಸ್ನೇಹಿತ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಬಸವನಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರಕಾರಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ.