ಬೆಂಗಳೂರು: ರಾಜ್ಯಪಾಲರು ತಾರತಮ್ಯ ಧೋರಣೆಯ ಮೂಲಕ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ನಡೆಸಿದ ಯಾಜಭವನ ಚಲೋ ಪ್ರತಿಭಟನೆಯಲ್ಲಿ ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರದ ಯುವ ನಾಯಕ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪ್ರಮೋದ್ ಶ್ರೀನಿವಾಸ್ ಭಾಗವಹಿಸಿದ್ದರು.
ವಿರೋಧ ಪಕ್ಷದ ಸದಸ್ಯರ ಭ್ರಷ್ಟಾಚಾರ ಪ್ರಕರಣಗಳ ತನಿಖೆಗೆ ಲೋಕಾಯುಕ್ತ, ಎಸ್ಐಟಿ ಸಂಸ್ಥೆಗಳು ಕೋರಿರುವ ಅನುಮತಿಯನ್ನು ನೀಡುವಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೇತೃತ್ವದ ನಿಯೋಗ ರಾಜಭವನಕ್ಕೆ ತೆರಳಿ ಮನವಿ ಮಾಡಿತು.
ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಸರಕಾರದ ಹಿರಿಯ ಸಚಿವರು, ಶಾಸಕರು, ಮುಖಂಡರು ಭಾಗವಹಿಸಿದ್ದರು. ವಿಧಾನಸೌಧದ ಗಾಂಧಿ ಪ್ರತಿಮೆಯ ಬಳಿಯಿಂದ ಹೊರಟ ಮೆರವಣಿಗೆ ರಾಜಭವನದವರೆಗೆ ತೆರಳಿತು.