ನವದೆಹಲಿ: 78 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ದೆಹಲಿಯ ಕೆಂಪುಕೋಟೆಯ ಮೇಲೆ ಪ್ರಧಾನಿ ನರೇಂದ್ರ ಮೋದಿ 11 ನೇ ಬಾರಿಗೆ ಧ್ವಜಾರೋಹಣ ಮಾಡಿದರು.
ದ್ವಜಾರೋಹಣದ ನಂತರ ಕೆಂಪುಕೋಟೆಯಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಭಾರತ 78 ವರ್ಷಗಳಲ್ಲಿ ಬದಲಾಗಿದೆ. ಇಂದು ವಿಶ್ವವೇ ಭಾರತದ ಕಡೆಗೆ ಬೆರಗುಗಣ್ಣಿನಿಂದ ನೋಡುವಂತಾಗಿದೆ. ಅಷ್ಟರ ಮಟ್ಟಿಗೆ ನಾವು ಸಾಧನೆಯ ಹಾದಿಯಲ್ಲಿದ್ದೇವೆ ಎಂದು ನುಡಿದರು.
ಇನ್ನೂ ಮಹಿಳೆಯರ ರಕ್ಷಣೆಗೆ ಸರಕಾರ ತೆಗೆದುಕೊಂಡ ಕ್ರಮಗಳ ಬಗ್ಗೆ ವಿವರಿಸಿದ ಪ್ರಧಾನಿ ನರೇಂದ್ರ ಮೋದಿ, ಮಹಿಳೆಯರಿಗೆ ತೊಂದರೆಕೊಡುವವರನ್ನು ಮಟ್ಟ ಹಾಕುವ ಕಠಿಣ ಕಾನೂನು ತಂದಿದ್ದೇವೆ ಎಂದರು. ರಕ್ಷಣಾ ಕ್ಷೇತ್ರದಲ್ಲಿ ಆತ್ಮನಿರ್ಭರ್ ಕಡೆಗೆ ಹೆಜ್ಜೆಯಿಟ್ಟಿದ್ದೇವೆ ಎಂದು ಹೆಮ್ಮೆಯಿಂದ ನುಡಿದರು.