ರಾಜಕೀಯ ಸುದ್ದಿ

ಮೆಟ್ರೋ ಪ್ರಯಾಣ ದರ ಏರಿಕೆ: ಪ್ರತಿಭಟನೆಯ ಪೈಪೋಟಿ

Share It

ಬೆಂಗಳೂರು: ಮೆಟ್ರೋ ಪ್ರಯಾಣ ದರ ಏರಿಕೆಯ ಬಗ್ಗೆ ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ ನಡುವೆ ಪೈಪೋಟಿ ನಡೆಯುತ್ತಿದ್ದು, ಪ್ರತಿಭಟನೆಯಲ್ಲೂ ಪೈಪೋಟಿ ಮುಂದುವರಿದಿದೆ.

ದರ ಹೆಚ್ಚಳಕ್ಕೆ ರಾಜ್ಯ ಸರಕಾರ ಕಾರಣ ಎಂದು ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದು, ಮೆಟ್ರೋ ಪ್ರಯಾಣ ದರ ಏರಿಕೆ ಮಾಡಿದವರು ಕೇಂದ್ರ ಸರಕಾರ ಎಂದು ಕಾಂಗ್ರೆಸ್ ನಾಯಕರು ವಾದ ಮಾಡುತ್ತಿದ್ದಾರೆ.

ಈ ನಡುವೆ ಇಂದು ಸರಕಾರದ ವಿರುದ್ಧ ಪ್ರತಿಭಟನೆ ನಡೆಸಲು ಬಿಜೆಪಿ ಮುಂದಾಗಿತ್ತು. ನಗರದ ಪ್ರೀಢಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದ ಬಿಜೆಪಿ ಇದೀಗ, ತನ್ನ ಪ್ರತಿಭಟನೆಯನ್ನು ನಾಳೆಗೆ ಮುಂದೂಡಿದೆ.

ಇದಕ್ಕೆ ಕಾರಣ ಇಂದು ಫ್ರೀಢಂ ಪಾರ್ಕ್ನಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿರುವುದು. ಕಾಂಗ್ರೆಸ್ ಕೂಡ ಮೆಟ್ರೋ ಪ್ರಯಾಣ ದರ ಏರಿಕೆಯ ವಿರುದ್ಧ ಪ್ರತಿಭಟನೆಗೆ ಕರೆ ನೀಡಿದೆ. ಹೀಗಾಗಿ, ನಾಳೆ ಬಿಜೆಪಿ ಪ್ರತಿಭಟನೆ ನಡೆಸಲಿದೆ.

ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ಎರಡೂ ಪಕ್ಷಗಳು ದರ ಏರಿಕೆಯ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದರೂ, ಜನರು ಇದರಲ್ಲಿ ಯಾರೂ ಸುಳ್ಳು ಹೇಳುತ್ತಿದ್ದಾರೆ, ಯಾವುದು ಸತ್ಯ ಎಂದು ಗೊಂದಲಕ್ಕೆ ಬಿದ್ದಿದ್ದಾರೆ.


Share It

You cannot copy content of this page