ಹೈದರಾಬಾದ್: ಬೆಟ್ಟಿಂಗ್ ಆ್ಯಪ್ ಪ್ರಚಾರ ಮಾಡಿದ್ದ 25 ತೆಲುಗು ನಟ-ನಟಿಯರ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಕ್ರಮಕ್ಕೆ ಮುಂದಾಗಿದ್ದಾರೆ.
ನಟ ಪॐ್ರಕಾಶ್ ರಾಜ್, ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ, ಪ್ರಣೀತಾ ಸುಭಾಷ್, ನಿಧಿ ಅಗರ್ವಾಲ್, ವರ್ಷಿಣಿ ಸೇರಿದಂತೆ ಬೆಟ್ಟಿಂಗ್ ಆ್ಯಪ್ ಪ್ರಚಾರ ಮಾಡುತ್ತಿದ್ದ 25 ನಟ ನಟಿಯರ ಮೇಲೆ ಪ್ರಕರಣ ದಾಖಲಾಗಿದೆ.
ಹೈದರಾಬಾದ್ನ ಮಿಯಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ನಟನಟಿಯರಿಗೆ ಆತಂಕ ಎದುರಾಗಿದೆ. ಪೊಲೀಸರು ಈಗಾಗಲೇ ತನಿಖೆ ಆರಂಭಿಸಿದ್ದಾರೆ. ಸೆಕ್ಷನ್ 318 ರಡಿ ಪ್ರಕರಣ ದಾಖಲಾಗಿದ್ದು, ಸೂಕ್ತ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಹೈದರಾಬಾದ್ ಪೊಲೀಸರು ತೆಗೆದುಕೊಂಡಿರುವ ಈ ಕ್ರಮ ಕರ್ನಾಟಕದಲ್ಲಿಯೂ ಸಂಚಲನ ಸೃಷ್ಟಿಸಿದೆ. ರಾಜ್ಯದಲ್ಲಿಯೂ ಆನ್ಲೈನ್ ಗೇಮಿಂಗ್ ಆ್ಯಪ್ಗಳನ್ನು ಪ್ರಮೋಚ್ ಮಾಡುವ ನಟನಟಿಯರಿಗೆ ಆತಂಕ ಶುರುವಾಗಿದೆ.
ಜತೆಗೆ ಆನ್ಲೈನ್ ಗೇಮಿಂಗ್ ಕುರಿತು ವಿಧಾನಸಭೆಯಲ್ಲಿ ಚರ್ಚೆ ನಡೆದಿದ್ದು, ಪಿಎಗಳು ಪೊಲೀಸರ ಜತೆಗೆ ಸೇರಿಕೊಂಡು ಆನ್ಲೈನ್ ಬೆಟ್ಟಿಂಗ್ ಕುರಿತು ಡೀಲ್ ಮಾಡುತ್ತಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಬೆಟ್ಟಿಂಗ್ ಆ್ಯಪ್ಗಳನ್ನು ಪ್ರಚಾರ ಮಾಡುವವರಿಗೆ ಆತಂಕ ಶುರುವಾಗಿದೆ.