ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣ: ಅಲ್ಲು ಅರ್ಜುನ್‌ಗೆ ಜಾಮೀನು
ಬೆಂಗಳೂರು: ಹೈದರಾಬಾದ್ ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟ ಅಲ್ಲು ಅರ್ಜುನ್‌ಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಸಂಧ್ಯಾ ಥಿಯೇಟರ್‌ನಲ್ಲಿ ಪುಷ್ಪ-೨ ಸಂಭ್ರಮಾಚರಣೆಯ ವೇಳೆ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಒಬ್ಬ ಮಹಿಳಾ ಅಭಿಮಾನಿ ಸಾವನ್ನಪ್ಪಿದ್ದು, ಮತ್ತೊಬ್ಬ ಬಾಲಕ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ. ಈ ಘಟನೆಗೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ವಿರುದ್ಧ ಪ್ರಕರಣ ದಾಖಲಿಸಿದ್ದ ಪೊಲೀಸರು, ಅವರನ್ನು ಬಂಧಿಸಿದ್ದರು.
ಬಂಧನ ದಿನವೇ ಹೈಕೋರ್ಟ್ ಅವರಿಗೆ ಮಧ್ಯಂತರ ಜಾಮೀನು ನೀಡಿತ್ತು. ಹೀಗಾಗಿ, ಅವರನ್ನು ಬಿಡುಗಡೆ ಮಾಡಲಾಗಿತ್ತು. ಇದೀಗ ಅಲ್ಲು ಅರ್ಜುನ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಅವರಿಗೆ ಜಾಮೀನು ಮಂಜೂರು ಮಾಡಿದೆ.