ಚಿಕ್ಕಮಗಳೂರು: ಆನೆ ಸೆರೆ ಹಿಡಿಯಲು ನಡೆಯುತ್ತಿದ್ದ ಕಾರ್ಯಾಚರಣೆ ವೇಳೆ ಸಿಬ್ಬಂದಿಯೊಬ್ಬರು ಅಪಾಯಕ್ಕೆ ಸಿಲುಕಿಕೊಂಡಿದ್ದ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಅರಣ್ಯ ಪ್ರದೇಶದ ಸಾಲೂರು ಬಳಿ ಆನೆಯನ್ನು ಸೆರೆಹಿಡಿಯಲು ಕಾರ್ಯಾಚರಣೆ ನಡೆಸಲಾಗುತ್ತಿತ್ತು. ಈ ವೇಳೆ ಆನೆ ದಾಳಿಯಿಂದ ಸ್ವಲ್ಪದರಲ್ಲೇ ಸಿಬ್ಬಂದಿ ಪಾರಾಗಿದ್ದಾರೆ.
ಸಾಲೂರು ಬಳಿ ಸಲಗವೊಂದು ಮೂವರನ್ನು ಬಲಿ ಪಡೆದಿದೆ. ಹೀಗಾಗಿ, ತೋಟಕ್ಕೆ ಬಂದಿದ್ದ ಕಾಡಾನೆ ಓಡಿಸುವ ಕಾರ್ಯಾಚರಣೆ ನಡೆಯುತ್ತಿತ್ತು. ಆಗ ಸಲಗ ಏಕಾಏಕಿ ಸಿಬ್ಬಂದಿಯ ಕಡೆಗೆ ನುಗ್ಗಿಬಂದಿದ್ದು, ಕೂದಲೆಳೆ ಅಂತರದಲ್ಲಿ ಇಟಿಎಫ್ ಸಿಬ್ಬಂದಿ ಬಚಾವಾಗಿದ್ದಾರೆ.