ಮೈಸೂರು: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣದಲ್ಲಿ ಪೊಲೀಸರು 13 ಆರೋಪಿಗಳನ್ನು ಬಂಧಿಸಿದ್ದಾರೆ.
ಸಿಸಿಟಿವಿ ದೃಶ್ಯಾವಳಿ ಮತ್ತು ಇತರ ಸಾಕ್ಷö್ಯಗಳ ಆಧಾರದಲ್ಲಿ 12 ಯುವಕರು ಮತ್ತು ಓರ್ವ ಬಾಲಕನನ್ನು ಪೊಲೀಸರು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ 12 ಜನರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದು, ಬಾಲಾಪರಾಧಿಯನ್ನು ಬಾಲಮಂದಿರಕ್ಕೆ ಒಪ್ಪಿಸಿದೆ.
ಆರೋಪಿಗಳೆಲ್ಲರೂ ಪೊಲೀಸ್ ಠಾಣೆಯ ಅಕ್ಕಪಕ್ಕದ ನಿವಾಸಿಗಳು ಎಂದು ಹೇಳಲಾಗುತ್ತಿದೆ. ಎಲ್ಲ ಆರೋಪಿಗಳಿಗೆ ಕೆ.ಆರ್.ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿದ ಪೊಲೀಸರು, ನಂತರ ಅವರನ್ನು ಜೈಲಿಗೆ ಕಳುಹಿಸಿದ್ದಾರೆ.
ಗಲಭೆಯಲ್ಲಿ ಸುಮಾರು 1 ಸಾವಿರಕ್ಕೂ ಹೆಚ್ಚು ಮಂದಿ ಭಾಗಿಯಾಗಿದ್ದರು ಎಂದು ತನಿಖೆ ವೇಳೆ ಗೊತ್ತಾಗಿದೆ. ಈ ಸಂದರ್ಭದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದ ಮುಸ್ಲಿಂ ಮುಖಂಡ ಎಸ್ಕೇಪ್ ಆಗಿದ್ದು, ಆತನ ಹುಟುಕಾಟಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ವಿವಾದಾತ್ಮಕ ಪೋಸ್ಟ್ ಹಾಕಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿ, ಫೆ.9 ರಂದು ಠಾಣೆಗೆ ಕರೆತಂದಿದ್ದರು. ಆಗ ಮುಸ್ಲಿಂ ಸಮುದಾಯದ ಯುವಕರ ಗುಂಪು ಠಾಣೆಯ ಬಳಿ ಜಮಾಯಿಸಿತು. ಈ ವೇಳೆ ಮುಸ್ಲಿಂ ಮುಖಂಡನೊಬ್ಬ, ತಮ್ಮ ಧರ್ಮಕ್ಕೆ ಅವಮಾನ ಮಾಡಿದ ಆರೋಪಿ ಇಲ್ಲಿದ್ದಾನೆ. ಆತನನ್ನು ಬಿಡಬಾರದು ಎಂಧು ಪ್ರಚೋದನಕಾರಿ ಭಾಷಣ ಮಾಡಿದ್ದ.
ರಾತ್ರಿ 8.30ಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ ಯುವಕರು, ವಾಹನಸ ಸಂಚಾರಕ್ಕೆ ಅಡ್ಡಿ ಮಾಡಿದ್ದರು. ಕೆಲ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದರು. ಪೊಲೀಸರ ಮೇಲೆ ಹಾಗೂ ಪೊಲೀಸ್ ವಾಹನಗಳ ಮೇಲೆಯೇ ಕಲ್ಲು ತೂರಾಟ ನಡೆಸಿದ್ದರು. ಬಂಬೋಬಸ್‌ನಲ್ಲಿದ್ದ ಪೊಲೀರ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ರಸ್ತೆಯಲ್ಲಿ ಓಡಾಡುವ ವಾಹನಗಳ ಮೇಲೆ ವಾಹನ ಕಲ್ಲು ತೂರಾಟ ನಡೆಸಿದ್ದರು.