ಡಿ.9ರಿಂದ ಬೆಳಗಾವಿಯ ಚಳಿಗಾಲದ ಅಧಿವೇಶನ
ಬೆಳಗಾವಿ: ಡಿಸೆಂಬರ್ 9 ರಿಂದ 20ರವರೆಗೆ ಕರ್ನಾಟಕದ ವಿಧಾನಮಂಡಲದ ಚಳಿಗಾಲದ ಅಧಿವೇಶನ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿದೆ.
ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಅಧಿವೇಶನ ಕರೆದಿದ್ದು, ಡಿ. 9ರಂದು ಬೆಳಗ್ಗೆ 11 ಗಂಟೆಗೆ ಅಧಿವೇಶನ ಆರಂಭವಾಗಲಿದೆ. ಇತ್ತೀಚಿಗೆ ಸುವರ್ಣ ವಿಧಾನಸೌಧಕ್ಕೆ ಭೇಟಿ ನೀಡಿದ್ದ ವಿಧಾಸಭಾಧ್ಯಕ್ಷ ಯು.ಟಿ ಖಾದರ್ ಮತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಅಧಿಕಾರಿಗಳ ಸಭೆ ನಡೆಸಿದ್ದರು. ಅಲ್ಲದೆ, ಅಧಿವೇಶನ ನಡೆಸಲು ಅಗತ್ಯವಾದ ಸಿದ್ಧತೆಗಳನ್ನು ಮಾಡುವಂತೆ ಸೂಚನೆ ನೀಡಿದ್ದರು.