ಬೆಂಗಳೂರು: ನಗರದ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯದ (ಯುವಿಸಿಇ) ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದಲ್ಲಿ 2024-25ನೇ ಸಾಲಿನಲ್ಲಿ ಐದು ವಿಷಯಗಳ ಬೋಧನೆಗೆ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಎಂಟೆಕ್/ಪಿಎಚ್‌ಡಿ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತರು ಯುವಿಸಿಇ ವೆಬ್‌ಸೈಟ್ www.uvce.karnataka.gov.in ನಲ್ಲಿ ಅರ್ಜಿ ಪಡೆದು ನಿಗದಿತ ನಮೂನೆಯಲ್ಲಿ ಸೂಸ್ತ ದಾಖಲೆಗಳ ಪ್ರತಿಗಳೊಂದಿಗೆ ಕೆ.ಆರ್.ವೃತ್ತದಲ್ಲಿರುವ ಯುವಿಸಿಇಯ ಕ್ಯಾಂಪಸ್‌ನಲ್ಲಿ ಸಂಬಂಧಿಸಿದ ವಿಭಾಗದ ಮುಖ್ಯಸ್ಥರಿಗೆ ಫೆಬ್ರವರಿ 13ರೊಳಗೆ ಸಲ್ಲಿಸಬಹುದು ಎಂದು ವಿವಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.