ಉಡುಪಿ: ಡಿ.ಕೆ ಶಿವಕುಮಾರ್ ಕರ್ನಾಟಕದ ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕಾರ್ಕಳದಲ್ಲಿ ಮಾಜಿ ಸಿಎಂ ವೀರಪ್ಪ ಮೊಯ್ಲಿ ಬಾಂಬ್ ಸಿಡಿಸಿದ್ದಾರೆ.
ಉಡುಪಿಯ ಕಾರ್ಕಳದಲ್ಲಿ ನಡೆದ ಕಾಂಗ್ರೆಸ್ ಕುಟುಂಬೋತ್ಸವದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿಯೇ ಈ ಹೇಳಿಕೆ ನೀಡಿದ ವೀರಪ್ಪ ಮೊಯ್ಲಿ ಹೀಗೆಂದರು: “ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವುದು ತೀರ್ಮಾನ ಆಗಿರುವ ವಿಷಯ. ಡಿ.ಕೆ ಶಿವಕುಮಾರ್ ಅವರಿಗೆ ಮೊದಲು ಎಂಎಲ್ಎ ಟಿಕೆಟ್ ಕೊಡಿಸಿದ್ದೇ ನಾನು. ಅವರು ಈಗ ಯಶಸ್ವಿ ನಾಯಕರಾಗಿ ಬೆಳೆದಿರುವುದು ಖುಷಿಯ ಸಂಗತಿ ಎಂದಿದ್ದಾರೆ.
ಡಿ.ಕೆ ಶಿವಕುಮಾರ್ ಅವರೇ ನೀವು ಯಾವುದಕ್ಕೂ ಪ್ರತಿಕ್ರಿಯೆ ಕೊಡಬಾರದು. ನಿಮ್ಮ ವಿರುದ್ಧ ಹೇಳಿಕೆಗಳು ಬರಬಹುದು, ಹೋಗಬಹುದು. ಅದರ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ ಎಂದು ಮೊಯ್ಲಿ ಕಿವಿಮಾತು ಹೇಳಿದರು.
“ಡಿಕೆ ಸಿಎಂ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಯಾರೂ ಕೂಡ ಆತಂಕ ಪಡಬೇಕಾದ ಅವಶ್ಯಕತೆ ಇಲ್ಲ. ಟೀಕೆ ಮಾಡುವವರು ವೈಯಕ್ತಿಕ ತೃಪ್ತಿಗೆ ಟೀಕೆ ಮಾಡಬಹುದು. ಸಿಎಂ ಹುದ್ದೆ ಯಾರೂ ಕೊಡುವ ವರ ಅಲ್ಲ. ಅದು ಡಿ.ಕೆ.ಶಿವಕುಮಾರ್ ಸಂಪಾದನೆ ಮಾಡಿರುವ ಶಕ್ತಿ. ಅವರು ಸಂಪಾದನೆ ಮಾಡಿರುವ ಶಕ್ತಿಯೇ ಮುಖ್ಯಮಂತ್ರಿ ಪದವಿ. ಈ ಪುಣ್ಯಭೂವಿಯಲ್ಲಿ ನಾನು ಆಡಿದ ಮಾತು ನೂರಕ್ಕೆ ನೂರು ಸತ್ಯ. ಕೋಟಿ ಕೋಟಿ ಪ್ರಯತ್ನ ಮಾಡಿದರೂ ಡಿಕೆಶಿಗೆ ಮುಖ್ಯಮಂತ್ರಿ ಹುದ್ದೆ ತಪ್ಪಿಸಲು ಆಗುವುದಿಲ್ಲ ಅನ್ನೋದು ಶತಸಿದ್ಧ ಎಂದು ವೀರಪ್ಪ ಮೊಯ್ಲಿ ವೇದಿಕೆಯಲ್ಲಿ ಭವಿಷ್ಯ ನುಡಿದರು.