ವಿದೇಶಿ ಮಹಿಳೆಯ ಅತ್ಯಾಚಾರ-ಕೊಲೆ: ಆರೋಪಿ ದೋಷಿ ಎಂದು ತೀರ್ಪು ನೀಡಿದ ನ್ಯಾಯಾಲಯ

Share It

ಗೋವಾ: 2017ರಲ್ಲಿ ನಡೆದಿದ್ದ ಐರಿಷ್-ಬ್ರಿಟಿಷ್ ಮಹಿಳೆಯ ಅತ್ಯಾಚಾರ ಮತ್ತು ಕೊಲೆಯ ಪ್ರಕರಣದಲ್ಲಿ ಆರೋಪಿ, ವಿಕತ್ ಭಗತ್ ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದ್ದು, ಶಿಕ್ಷೆಯ ಪ್ರಮಾಣವನ್ನು ಫೆ.17ರಂದು ಪ್ರಕಟಿಸಲಿದೆ.

ಪ್ರಕರಣದಲ್ಲಿ 31 ವರ್ಷದ ಭಗತ್, ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದ ಆರೋಪ ಹೊರಿಸಲಾಗಿತ್ತು. 2017 ರ ಮಾರ್ಚ್ನಲ್ಲಿ ನಡೆದಿರುವ ಪ್ರಕರಣದಲ್ಲಿ ಗೋವಾದ ಕನಕೋವಾ ನಗರದಲ್ಲಿ ಲೈಂಗಿಕ ದೌರ್ಜನ್ಯ ಮತ್ತು ಕೊಲೆಗೆ ಒಳಗಾದ ಮಹಿಳೆಯ ನಗ್ನದೇಹ ಅರಣ್ಯ ಪ್ರದೇಶದಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿತ್ತು.

ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಸೂಕ್ತ ಪುರಾವೆಗಳನ್ನು ನೀಡಿದ್ದರು. ಅಪರಾಧಿಗೆ ಗರಿಷ್ಠ ಶಿಕ್ಷೆ ವಿಧಿಸುವಂತೆ ಪ್ರಾಸಿಕ್ಯೂಷನ್ ನ್ಯಾಯಾಲಯವನ್ನು ಕೋರಿದ್ದು, ಫೆ.17ರಂದು ಶಿಕ್ಷೆ ಪ್ರಕಟವಾಗಲಿದೆ ಎಂದು ಕೊಲೆಯಾದ ಮಹಿಳೆಯ ತಾಯಿಯ ಪರ ವಕೀಲರಾದ ವಿಕ್ರಮ್ ವರ್ಮಾ ಪಿಟಿಐಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಪ್ರಕರಣದ ವಿಚಾರಣೆ ನಡೆಸಿದ್ದ ಮಾರ್ಗೋವ್ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶೆ ಕ್ಷಮಾ ಜೋಶಿ ಅವರು, ಆರೋಪಿಯನ್ನು ದೋಷಿ ಎಂದು ಘೋಷಿಸಿದ್ದು, ಶಿಕ್ಷೆಯ ಪ್ರಮಾಣವನ್ನು ಪ್ರಕಟ ಮಾಡಲಿದ್ದಾರೆ ಎಂದು ಸುದ್ದಿಸಂಸ್ಥೆ ತಿಳಿಸಿದೆ.


Share It

You May Have Missed

You cannot copy content of this page