ಬೆಂಗಳೂರು: ಹೊಸ ವರ್ಷದ ರಾತ್ರಿ ಯುವತಿಯನ್ನು ಕಾರಿನಲ್ಲಿ ಕೂರಿಸಿಕೊಂಡು, ಅಸಭ್ಯವಾಗಿ ವರ್ತಿಸಿ, ಇಡೀ ರಾತ್ರಿ ಸುತ್ತಾಡಿಸಿದ ಆರೋಪದಲ್ಲಿ ಮೂವರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ.
ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯುವತಿಯ ದೂರಿನ ಅನ್ವಯ ಪೊಲೀಸರು ಎಫ್‌ಐಆರ್ ದಾಖಲು ಮಾಡಿಕೊಂಡಿದ್ದಾರೆ. ಹೇಮಂತ್, ಪುನೀತ್, ಅಜಿತ್ ಎಂಬುವವರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಅವರನ್ನು ಬಂಧಿಸಲು ಪೊಲೀಸರು ಸಜ್ಜಾಗಿದ್ದಾರೆ.
ಬ್ರಿಗೇಡ್ ರಸ್ತೆಯ ಹೊಸ ವರ್ಷದ ಸಂಭ್ರಮಾಚರಣೆಯ ನಂತರ ಕಾರಿನಲ್ಲಿ ಕೂರಿಸಿಕೊಂಡು ಬಲವಂತವಾಗಿ ಡ್ರಿಂಕ್ಸ್ ಮಾಡಿಸಿದ್ದು, ಅನಂತರ ಕಾರಿನಲ್ಲಿ ಇಡೀ ರಾತ್ರಿ ಸುತ್ತಾಡಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.