ಮೈಸೂರು: ಮೈಸೂರಿನ ಇನ್ಫೋಸಿಸ್ ಆವರಣದಲ್ಲಿ ಕಾಣಿಸಿಕೊಂಡ ಚಿರತೆ ಸೆರೆ ಕಾರ್ಯಾಚರಣೆ ಅರಣ್ಯ ಇಲಾಖೆಗೆ ತಲೆನೋವಾಗಿದ್ದು, ಡ್ರೋನ್ ಕಾರ್ಯಾಚರಣೆ ಆರಂಭಿಸಲು ಸಿದ್ಧತೆ ನಡೆದಿದೆ.
ಚಿರತೆ ಸೆರೆಹಿಡಿಯು ಅರಣ್ಯ ಇಲಾಖೆ ಸಿಬ್ಬಂದಿಯಿAದ ಕಾರ್ಯಾಚರಣೆ, ನಡೆಯುತ್ತಿದ್ದು ಅರಣ್ಯ ಇಲಾಖೆಯ ೫೦ ಸಿಬ್ಬಂದಿ ಹಾಗೂ ಇನ್ಫೋಸಿಸ್‌ನ 70 ಸಿಬ್ಬಂದಿಯ ತಂಡವನ್ನು ರಚನೆ ಮಾಡಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಒಂದು ವಾರದಿಂದ ಕಾರ್ಯಾಚರಣೆ ನಡೆಯುತ್ತಿದ್ದರೂ, ಚಿರತೆ ಈವರೆಗೆ ಬೋನಿಗೆ ಬೀಳದೆ ಸತಾಯಿಸುತ್ತಿದೆ.
ಇದು ಅರಣ್ಯ ಇಲಾಖೆ ಸಿಬ್ಬಂದಿಗೆ ತಲೆನೋವಾಗಿದ್ದು, ಚಿರತೆ ಹಾಗೂ ಆನೆ ಕಾರ್ಯಾಚರಣೆ ತಂಡದಿAದ ಸತತವಾಗಿ ಕಾರ್ಯಾಚರಣೆ ನಡೆಯುತ್ತಿದೆ.
ಸಿಬ್ಬಂದಿ ಡ್ರೋನ್ ಕ್ಯಾಮೆರಾ ಮೂಲಕ ಪತ್ತೆ ಕಾರ್ಯ ನಡೆಸಿದ್ದರೂ, ಕ್ಯಾಮೆರಾ ಕಣ್ಣಿಗೆ ಸಿಕ್ಕದ ಚಿರತೆ ಓಡಾಡುತ್ತಿದೆ ಎನ್ನಲಾಗಿದೆ. ಕ್ಯಾಂಪಸ್ ಆವರಣದಲ್ಲೇ ಸಿಬ್ಬಂದಿ ಮೊಕ್ಕಾಂ ಹೂಡಿದ್ದು, ಚಿರತೆಯ ಸೆರೆಗೆ ಹರಸಾಹಸ ಪಡುತ್ತಿದ್ದಾರೆ.