ಪರಮೇಶ್ವರ್‌ಗೆ ಸಿಎಂ ಸ್ಥಾನ ನೀಡುವಂತೆ ಮಠಾಧೀಶರ ಆಗ್ರಹ
ತುಮಕೂರು: ಡಾ. ಜಿ ಪರಮೇಶ್ವರ್ ಅವರಿಗೆ ಸಿಎಂ ಸ್ಥಾನ ನೀಡಬೇಕು ಎಂದು ೨೩ಕ್ಕೂ ಹೆಚ್ಚು ಮಠಾಧೀಶರು ಕಾಂಗ್ರೆಸ್ ಹೈಕಮಾಂಡ್‌ಗೆ ಆಗ್ರಹಿಸಿದ್ದಾರೆ.
ತುಮಕೂರಿನಲ್ಲಿ ಸಭೆ ಸೇರಿದ ಮಠಾಧೀಶರು ಪರಮೇಶ್ವರ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಪರಮೇಶ್ವರ್ ಎಂಟು ವರ್ಷ ಕೆಪಿಸಿಸಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಪಕ್ಷವನ್ನು ಸಂಕಷ್ಟದ ಸಮಯದಲ್ಲಿ ಅಧಿಕಾರಕ್ಕೆ ತರುವಲ್ಲಿಯೂ ಯಶಸ್ವಿಯಾಗಿದ್ದಾರೆ. ಹೀಗಾಗಿ, ಅವರನ್ನು ಸಿಎಂ ಮಾಡಬೇಕು ಎಂದು ಆಗ್ರಹಿಸಿದ್ದಾರೆ….


