ಬೆಂಗಳೂರು: ನಟ ದರ್ಶನ್ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದು, ಅಮಾನುಷವಾಗಿ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಈ ನಡುವೆ ನಟ ದರ್ಶನ್ ರೇಣುಕಾ ಸ್ವಾಮಿಯನ್ನು ಭೀಕರವಾಗಿ ಕೊಲೆ ಮಾಡಿದ್ದು, ಬೆಲ್ಟ್ ನಿಂದ ಹೊಡೆದಿದ್ದರು, ಎತ್ತಿ ಎಸೆದಿದ್ದರು, ಎಲೆಕ್ಟ್ರಿಕ್ ಶಾಕ್ ಕೊಟ್ಟಿದ್ದರು, ಎದೆಗೆ, ಮರ್ಮಾಂಗಕ್ಕೆ ಒದ್ದಿದ್ದರು ಎಂಬೆಲ್ಲ ವಿಚಾರಗಳು ಚರ್ಚೆಯಾಗುತ್ತಿವೆ.
ಆದರೆ, ದರ್ಶನ್ ಅಮಾನುಷ ಕೊಲೆಗಳ ವಿಚಾರದಲ್ಲಿ ಅನೇಕ ಸಲ ದನಿಯೆತ್ತಿದ್ದರು ಎಂಬುದು ಬಹುತೇಕರಿಗೆ ಗೊತ್ತಿಲ್ಲ ಎನ್ನಬಹುದು. ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆಯಾದ ಸಂದರ್ಭದಲ್ಲಿ ದರ್ಶನ್, ಅಮಾನುಷ ಕೊಲೆಗಳ ಕುರಿತು ಬಹಳ ಅಸ್ಥೆಯಿಂದ ಮಾತನಾಡಿದ್ದನ್ನು ಇಲ್ಲಿ ಸ್ಮರಿಸಬಹುದು.
ಏಪ್ರಿಲ್ 20 ರಲ್ಲಿ #justicefornehehiremuth ಟ್ರೆಂಡ್ ನಲ್ಲಿ ಟ್ವೀಟ್ ಮಾಡಿದ್ದರು. ಅವರ ಟ್ವೀಟ್ ಈ ರೀತಿ ಇತ್ತು. “ಪ್ರೀತಿಯ ಹೆಸರಲ್ಲಿ ಇಂತ ಅಮಾನುಷಕರವಾದ ಕೃತ್ಯ ಮಾಡಿರುವವರಿಗೆ ನ್ಯಾಯಾಂಗದ ಅನುಸಾರವಾಗಿ ತಕ್ಕ ಶಿಕ್ಷೆ ಸಿಗಲಿ. ಇನ್ನು ಬಾಳಿ ಬದುಕಬೇಕಿದ್ದ ೨೩ ವಯಸ್ಸಿನ ನೇಹಾ ಹಿರೇಮಠ್ ರವರ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ಸಹಿಸಿಕೊಳ್ಳುವ ಶಕ್ತಿ ಅವರ ಕುಟುಂಬಕ್ಕೆ ದೇವರು ನೀಡಲಿ” ಎಂದಿದ್ದರು.
ಈ ಟ್ವೀಟ್ ಅನ್ನು ಸಾವಿರಾರು ಜನ ಲೈಕ್ ಮಾಡಿದ್ದು ಲಕ್ಷಾಂತರ ಜನ ವೀಕ್ಷಣೆ ಮಾಡಿದ್ದರು. ಇದೀಗ ದರ್ಶನ್ ಸ್ವತಃ ಅಮಾನುಷ ಕೊಲೆ ಆರೋಪದಲ್ಲಿ ಜೈಲಿನಲ್ಲಿರುವುದು ವಿಪರ್ಯಾಸ ಎನ್ನಬಹುದು.