ಉಪಯುಕ್ತ ಸುದ್ದಿ

ಎಸ್ಎಸ್ಎಲ್ಸಿ ಫಲಿತಾಂಶ: ನೀವು ಇಲ್ಲಿ ಪಡೆಯಬಹುದು ರಿಸಲ್ಟ್

Share It

ಬೆಂಗಳೂರು: ರಾಜ್ಯದಲ್ಲಿ ನಡೆದಿದ್ದ 2024-25ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಇಂದು ಬೆಳಗ್ಗೆ 11.30ಕ್ಕೆ ಪ್ರಕಟಿಸಲಿದೆ.

ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಂದು ಬೆಳಗ್ಗೆ 11:30ಕ್ಕೆ ಸುದ್ದಿಗೋಷ್ಠಿ ಮೂಲಕ ಫಲಿತಾಂಶ ಪ್ರಕಟಿಸಲಿದ್ದಾರೆ. ಬಳಿಕ ಇಂದು ಮಧ್ಯಾಹ್ನ 12.30ರ ನಂತರ ಇಲಾಖೆಯ ಅಧಿಕೃತ ವೆಬ್​ಸೈಟ್​​ನಲ್ಲಿ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದಾಗಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮಾಡಿದಂತೆಯೇ ಎಸ್​ಎಸ್​​ಎಲ್​ಸಿ ವಿದ್ಯಾರ್ಥಿಗಳಿಗೂ ಈ ವರ್ಷ ಇನ್ನೆರಡು ಪರೀಕ್ಷೆಯ ಅವಕಾಶ ನೀಡಲಾಗುತ್ತಿದೆ. ಪರೀಕ್ಷೆಯಲ್ಲಿ ಉತ್ತೀರ್ಣರಾಗದಿದ್ದರೆ ಅಥವಾ ಉತ್ತಮ ಅಂಕ ಲಭಿಸದಿದ್ದರೆ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಇನ್ನು 2 ಬಾರಿ ಪರೀಕ್ಷೆ ಬರೆಯಬಹುದಾಗಿದೆ.

ಎಸ್​ಎಸ್​​ಎಲ್​ಸಿ ಫಲಿತಾಂಶ ಆನ್​ಲೈನ್​ನಲ್ಲಿ ಪ್ರಕಟವಾದ ನಂತರ, ಅಧಿಕೃತ ವೆಬ್​ಸೈಟ್ ಮೂಲಕ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕ ವಿವರ ಭರ್ತಿ ಮಾಡಿ ವಿದ್ಯಾರ್ಥಿಗಳು ಅಂಕಗಳನ್ನು ಪರಿಶೀಲಿಸಬಹುದಾಗಿದೆ.

ಎಸ್ಎಸ್ಎಲ್ಸಿ ಪರೀಕ್ಷೆ
ಫಲಿತಾಂಶ ಆನ್​ಲೈನ್​ನಲ್ಲಿ ನೋಡುವುದು ಹೀಗೆ…
ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಫಲಿತಾಂಶಗಳನ್ನು 12.30 ರ ನಂತರ‌
kseab.karnataka.gov.in ಅಥವಾ karresults.nic.in ನಲ್ಲಿ ಪರಿಶೀಲಿಸಬಹುದು.


Share It

You cannot copy content of this page