ಅಪರಾಧ ಸುದ್ದಿ

ಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ: ಮಹಜರು ವೇಳೆ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ

Share It

ಮಂಗಳೂರು: ಮಂಗಳೂರು ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣದ ಆರೋಪಿಗಳು ತಮ್ಮ ಅಟ್ಟಹಾಸ ಮುಂದುವರಿಸಿದ್ದು, ಸ್ಥಳ ಮಹಜರು ವೇಳೆ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿರುವ ಘಟನೆ ನಡೆದಿದೆ.

ಕೋಟೆಗಾರು ಬ್ಯಾಂಕ್‌ನಿAದ ಸ್ವಲ್ವವೇ ದೂರದ ಕರ್ನಾಟಕ ಕೇರಳ ಗಡಿಭಾಗದ ಸ್ಥಳದಲ್ಲಿ ಸ್ಥಳ ಮಹಜರು ನಡೆಸಲು ಕರೆದೊಯ್ದಿದ್ದ ಸಂದರ್ಭದಲ್ಲಿ ಆರೋಪಿ ಕಣ್ಣನ್ ಮಣಿ ಬಿಯರ್ ಬಾಟಲ್‌ನಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.

ಪಿಐ ಬಾಲಕೃಷ್ಣನ್ ಮೇಲೆ ಬಾಟಲ್‌ನಿಂದ ಹಲ್ಲೆ ನಡೆಸಿ, ಮತ್ತೇ ಕೆಲವು ಪೊಲೀಸರ ಮೇಲೆಯೂ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಈ ವೇಳೆ ಆತ್ಮರಕ್ಷಣೆಗಾಗಿ ಸಿಸಿಬಿ ಇನ್ಸ್ಪೆಕ್ಟರ್ ರಫೀಕ್ ಅವರಿಂದ ಆರೋಪಿ ಆರೋಪಿ ಕಣ್ಣನ್ ಮಣಿ ಕಾಲಿಗೆ ಗುಂಡು ಹಾರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಗಾಯಗೊಂಡಿರುವ ಆರೋಪಿ ಕಣ್ಣನ್ ಮಣಿ ಹಾಗೂ ಪೊಲೀಸರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನು ಬ್ಯಾಂಕ್‌ನಲ್ಲಿ ೧೫ ಕೋಟಿ ಮೌಲ್ಯದ ಚಿನ್ನಾಭರಣ ಇದ್ದು, ನಗದು ಸೇರಿ ೪ ಕೋಟಿಯ ಚಿನ್ನ ಕಳವು ಮಾಡಲಾಗಿದೆ ಎಂದು ಕೋಟೆಗಾರ್ ಬ್ಯಾಂಕ್ ಅಧ್ಯಕ್ಷರು ತಿಳಿಸಿದ್ದಾರೆ.


Share It

You cannot copy content of this page