ಕ್ರೀಡೆ ಸುದ್ದಿ

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಟೀಂಇಂಡಿಯಾ ಪ್ರಕಟ

Share It

ಇಂಗ್ಲೆಂಡ್ ವಿರುದ್ಧದ ಕ್ರಿಕೆಟ್ ಟೆಸ್ಟ್ ಸರಣಿಗಾಗಿ ಭಾರತ ಟೆಸ್ಟ್ ತಂಡವನ್ನು ಪ್ರಕಟಿಸಲಾಗಿದೆ. 18 ಸದಸ್ಯರ ಭಾರತ ತಂಡದ ನಾಯಕರಾಗಿ ಓಪನರ್ ಶುಭ್​ಮಾನ್​ ಗಿಲ್ ಆಯ್ಕೆಯಾಗಿದ್ದಾರೆ. ಇದಕ್ಕೂ ಮುನ್ನ ಟೀಮ್ ಇಂಡಿಯಾ ಟೆಸ್ಟ್ ತಂಡದ ನಾಯಕತ್ವ ಜಸ್​ಪ್ರೀತ್ ಬುಮ್ರಾಗೆ ಲಭಿಸಲಿದೆ ಎನ್ನಲಾಗಿತ್ತು. ಆದರೆ ಭವಿಷ್ಯದ ದೃಷ್ಟಿಯಿಂದ ಶುಭ್ ಮಾನ್ ಗಿಲ್ ಅವರಿಗೆ ನಾಯಕತ್ವ ನೀಡಲಾಗಿದೆ. ಹಾಗೆಯೇ ಉಪನಾಯಕನಾಗಿ ರಿಷಭ್ ಪಂತ್ ಆಯ್ಕೆಯಾಗಿದ್ದಾರೆ.

ಇನ್ನು ತಂಡದಲ್ಲಿ ಆರಂಭಿಕರಾಗಿ ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್ ಹಾಗೂ ಸಾಯಿ ಸುದರ್ಶನ್ ಕಾಣಿಸಿಕೊಂಡಿದ್ದಾರೆ. ಇವರಲ್ಲಿ ಇಬ್ಬರು ಇನಿಂಗ್ಸ್ ಆರಂಭಿಸುವುದು ಖಚಿತ. ಅಲ್ಲದೆ ಮತ್ತೊಬ್ಬರು 3ನೇ ಕ್ರಮಾಂಕದಲ್ಲಿ ಆಡುವ ಸಾಧ್ಯತೆಯಿದೆ.

ಮಧ್ಯಮ ಕ್ರಮಾಂಕದ ಬ್ಯಾಟರ್​ಗಳಾಗಿ ಕೆ.ಎಲ್ ರಾಹುಲ್, ಕರುಣ್ ನಾಯರ್ ಹಾಗೂ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಆಯ್ಕೆಯಾಗಿದ್ದಾರೆ.

ಆಲ್​ರೌಂಡರ್​ಗಳಾಗಿ ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್​ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಂಡಿದ್ದಾರೆ.

ಇನ್ನು ವೇಗದ ಬೌಲರ್​ಗಳಾಗಿ ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕರ್ನಾಟಕದ ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್ ಹಾಗೂ ಅರ್ಷದೀಪ್ ಸಿಂಗ್ ಆಯ್ಕೆಯಾಗಿದ್ದಾರೆ. ಅದರಂತೆ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಈ ಕೆಳಗಿನಂತಿದೆ…

ಭಾರತ ಟೆಸ್ಟ್ ತಂಡ: ಶುಭ್​ಮಾನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆ.ಎಲ್ ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಧ್ರುವ್ ಜುರೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್.

ಭಾರತ ಮತ್ತು ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ:
ಮೊದಲ ಟೆಸ್ಟ್: ಜೂನ್ 20-24 2025–ಹೆಡ್ಲಿಂಗ್ಲೆ, ಲೀಡ್ಸ್
2ನೇ ಟೆಸ್ಟ್: ಜುಲೈ 2-6, 2025 –ಎಡ್ಜ್‌ಬಾಸ್ಟನ್, ಬರ್ಮಿಂಗ್​ಹ್ಯಾಮ್

3ನೇ ಟೆಸ್ಟ್: ಜುಲೈ 10-14, 2025 – ಲಾರ್ಡ್ಸ್, ಲಂಡನ್

4ನೇ ಟೆಸ್ಟ್: 23-27 ಜುಲೈ, 2025 – ಓಲ್ಡ್ ಟ್ರಾಫರ್ಡ್, ಮ್ಯಾಂಚೆಸ್ಟರ್

5ನೇ ಟೆಸ್ಟ್: 31 ಜುಲೈ-4 ಆಗಸ್ಟ್, 2025 – ದಿ ಓವಲ್, ಲಂಡನ್


Share It

You cannot copy content of this page