ಅಪರಾಧ ಆರೋಗ್ಯ ಸುದ್ದಿ

ಮಧ್ಯಾಹ್ನದ ಬಿಸಿಯೂಟ ಸೇವಿಸಿ 59ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Share It


ಪುಡ್ ಪಾಯಿಸನ್ ಶಂಕೆ, ಪೋಷಕರಲ್ಲಿ ಆತಂಕ
ದೋರನಹಳ್ಳಿ ಗ್ರಾಮದ ಸರಕಾರಿ ಶಾಲೆಗಳಲ್ಲಿ ಘಟನೆ

ಯಾದಗಿರಿ : ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿ 59ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಾಂತಿ-ಭೇದಿಯಿಂದ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ಗ್ರಾಮದಲ್ಲಿರುವ ಅಂಬೇಡ್ಕರ್ ಸರಕಾರಿ ಪ್ರಾಥಮಿಕ ಶಾಲೆ, ಮಹಾಂತೇಶ್ವರ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಿರೇ ಅಗಸಿ ಶಾಲೆಯ ಮಕ್ಕಳು ಎನ್‌ಜಿಒ ಒಂದರಿಂದ ಪೂರೈಕೆಯಾಗಿದ್ದ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಪರಿಣಾಮ ಈ ಘಟನೆ ಸಂಭವಿಸಿದೆ.

ಬಿಸಿಯೂಟ ಸೇವಿಸಿದ ಕೆಲ ಹೊತ್ತಿನಲ್ಲೇ ಮಕ್ಕಳಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದ್ದು, ಆ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೇ ವೇಳೆ ಇನ್ನುಳಿದ ಮಕ್ಕಳು ಹೊಟ್ಟೆ ನೋವು ಒದ್ದಾಟ ನಡೆಸಿದ್ದ ಪರಿಣಾಮ ಅವರನ್ನು ಸಹ ಸರಕಾರಿ ಆಸ್ಪತ್ರೆಗೆ ಕಳುಹಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ . ಇದು ಪೋಷಕರಲ್ಲಿ ಆತಂಕ ಮೂಡಿಸಿದೆ.

ಸದ್ಯ ಅಸ್ವಸ್ಥಗೊಂಡ ವಿದ್ಯಾರ್ಥಿಗಳು ಶಹಾಪುರ ನಗರದ ಸರಕಾರಿ , ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಕ್ಕಳಿಗೆ ಪುಡ್ ಪಾಯಿಸನ್ ಯಾಗಿರುವ ಶಂಕೆ ವ್ಯಕ್ತವಾಗಿದೆ


Share It

You cannot copy content of this page