ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಮಗುವನ್ನು ಕೊಲೆ ಮಾಡಿ ಚೀಲದಲ್ಲಿ ತುಂಬಿ ಚರಂಡಿಗೆ ಎಸೆದಿರುವ ಘಟನೆ ವೈಟ್ಪೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ವೈಟ್ಫೀಲ್ಡ್ನ ನಲ್ಲೂರಹಳ್ಳಿಯಲ್ಲಿ ವಾಸವಾಗಿದ್ದ ಕೊಲ್ಕತ್ತಾ ಮೂಲದ 6 ವರ್ಷದ ಶಹಜಾನ್ ಕತೂರ್ ಎಂಬ ಮಗುವನ್ನು ಕೊಲೆ ಮಾಡಲಾಗಿದೆ. ಶವವು ಪಕ್ಕದ ಚರಂಡಿಯಲ್ಲಿ ಚೀಲದಲ್ಲಿ ಪತ್ತೆಯಾಗಿದ್ದು, ಅಕ್ಕಪಕ್ಕದವರೇ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ.
ಅಕ್ಕಪಕ್ಕದ ಮನೆಯವರ ಜತೆಗೆ ತಾಯಿ ಜಗಳ ಮಾಡಿಕೊಂಡಿದ್ದರು. ಹೀಗಾಗಿ, ತಾಯಿ ಮೇಲಿನ ದ್ವೇಷದಿಂದ ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಿರುವ ಕುಟುಂಬ ವೈಟ್ಫೀಲ್ಡ್ ಠಾಣೆಯಲ್ಲಿ ದೂರು ನೀಡಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಫಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

