ಸಚಿವ ರಾಮಲಿಂಗಾ ರೆಡ್ಡಿ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಮೊಣಕಾಲು ಶಸ್ತ್ರಚಿಕಿತ್ಸೆಗೊಳಗಾಗಿ ವಿಶ್ರಾಂತಿ ಪಡೆಯುತ್ತಿರುವ ಸಚಿವ ರಾಮಲಿಂಗಾ ರೆಡ್ಡಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾದ ಕಾರಣಕ್ಕೆ ರಾಮಲಿಂಗಾ ರೆಡ್ಡಿ ಅವರು ಬೆಳಗಾವಿ ಅಧಿವೇಶನದಲ್ಲಿ ಭಾಗವಹಿಸಿರಲಿಲ್ಲ. ಕಳೆದ 20 ದಿನಗಳಿಂದಲೂ ಅವರು ವಿಶ್ರಾಂತಿಯಲ್ಲಿದ್ದರು. ಈ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಅವರು, ತಮ್ಮ ಸಂಪುಟದ ಸಚಿವರ ಆರೋಗ್ಯ ವಿಚಾರಿಸಿದರು.
ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವರಾಗಿ, ಅನೇಕ ಮಹತ್ವದ ತೀರ್ಮಾನಗಳನ್ನು ಕೈಗೊಂಡಿದ್ದಾರೆ. ಸರಕಾರದ ಮೊದಲ ಗ್ಯಾರಂಟಿ ಯೋಜನೆಯಾದ ಶಕ್ತಿ ಯೋಜನೆಯ ಯಶಸ್ಸಿನಲ್ಲಿ ರಾಮಲಿಂಗಾ ರೆಡ್ಡಿ ಅವರ ಪಾತ್ರ ಪ್ರಮುಖವಾದುದು.
ಸಿಎಂ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಸಂದರ್ಭದಲ್ಲಿ ಕರ್ನಾಟಕದ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸೌಮ್ಯ ರೆಡ್ಡಿ ಉಪಸ್ಥಿತರಿದ್ದರು.