ನೆಲಮಂಗಲ : ಬಿಜೆಪಿ ಮೂಡಾ ಹಗರಣದ ವಿಚಾರದಲ್ಲಿ ನಡೆಸಿದ ಹೋರಾಟಕ್ಕೆ ಜಯ ಸಿಕ್ಕಿದ್ದು, ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಕ್ಷಣ ಗಣನೆ ಶುರುವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ಡಾಬಸ್ ಪೇಟೆ ಬಳಿಯ ಸಮಾಧಾನ ಮಠಕ್ಕೆ ಭೇಟಿ ನೀಡಿದ್ದ ವೇಳೆ ಮಾತನಾಡಿದ ಅವರು, ಮೂಡಾ ಪ್ರಕಣರ ಇಷ್ಟೊಂದು ದೊಡ್ಡ ಮಟ್ಟದಲ್ಲಿ ಸುತ್ತಿಕೊಳ್ಳುತ್ತದೆ ಎಂದು ಯಾರು ಊಹಿಸಿರಲಿಲ್ಲ, ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸಂದರ್ಭ ಬಂದೇ ಬರುತ್ತದೆ ಎಂದು ನನಗೆ ಅವತ್ತಡ ಗೊತ್ತಿತ್ತು ಎಂದರು.
ಮತ್ತೊಮ್ಮೆ ಮೈಸೂರಿಗೆ ಪಾದಯಾತ್ರೆ ಮಾಡುವ ಕುರಿತು ಪಕ್ಷದಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ನಮ್ಮ ಮೊದಲ ಪಾದಯಾತ್ರೆಗೆ ಯಶಸ್ಸು ಸಿಕ್ಕಿದೆ ಹೀಗಾಗಿ, ಮತ್ತೊಂದು ಪಾದಯಾತ್ರೆ ಬಗ್ಗೆ ಯೋಚನೆ ಮಾಡಿಲ್ಲ. ಇದೀಗ ಸಿದ್ದರಾಮಯ್ಯ ರಾಜೀನಾಮೆಗೆ ಕ್ಷಣಗಣನೆ ಆರಂಭವಾಗಿದೆ ಎಂದು ತಿಳಿಸಿದರು.
ಪಕ್ಷದೊಳಗೆ ತಮ್ಮ ವಿರುದ್ದ ನಡೆಯುತ್ತಿರುವ ವಿಚಾರಗಳ ಕುರಿತು ಮಾತನಾಡಲು ನಿರಾಕರಿಸಿದ ಅವರು, ನಮ್ಮ ಪಕ್ಷದೊಳಗಿನ ಎಲ್ಲ ಬೆಳವಣಿಗೆಯನ್ನು ಹೈಕಮಾಂಡ್ ನೋಡಿಕೊಳ್ಳುತ್ತದೆ. ನಾನು ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ನನಗೆ ಕೊಟ್ಟಿರುವ ಜವಾಬ್ದಾರಿಯನ್ನು ಮಾತ್ತವೇ ನಿಭಾಯಿಸುತ್ತೇನೆ ಎಂದು ತಿಳಿಸಿದರು.