ರಾಜಕೀಯ ಸುದ್ದಿ

ಸೌಮ್ಯಾ ರೆಡ್ಡಿ ಅವರಿಗೆ ಕರ್ನಾಟಕ ವುಮನ್ ಅಚೀವರ್ಸ್ ಅವಾರ್ಡ್

Share It


ಬೆಂಗಳೂರು: ಕೆಪಿಸಿಸಿ ಮಹಿಳಾ ಘಟಕದ ಸಾರಥ್ಯ ವಹಿಸಿರುವ ಸೌಮ್ಯಾ ರೆಡ್ಡಿ ಅವರು ಕರ್ನಾಟಕ ವುಮೆನ್ ಅಚೀವರ್ಸ್ ಅವಾರ್ಡ್ ಗೆ ಭಾಜನರಾಗಿದ್ದಾರೆ.

ಕೆ.ಕೃಷ್ಣಯ್ಯ ಶೆಟ್ಟಿ ಜ್ಯುವೆಲರ್ಸ್ ಪ್ರಾಯೋಜಕತ್ವದಲ್ಲಿ ಕರ್ನಾಟಕ ವುಮೆನ್ಸ್ ಅಚೀವರ್ಸ್ ಅವಾರ್ಡ್ ನ ರಾಜಕೀಯ ವಿಭಾಗದಲ್ಲಿ ಸೌಮ್ಯಾ ರೆಡ್ಡಿ ಅವರನ್ನು ಆಯ್ಕೆ ಮಾಡಲಾಗಿದೆ.

ಡಿಸೆಂಬರ್15 ರ ಭಾನುವಾರ ಯಶವಂತಪುರ ದ ತಾಜ್ ಹೊಟೇಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಜಯನಗರ ಕ್ಷೇತ್ರದ ಮಾಜಿ ಶಾಸಕಿ, ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಯಾಗಿ ಕಾರ್ಯನಿರ್ವಹಿಸಿದ ಸೌಮ್ಯಾ ರೆಡ್ಡಿ ಅವರು, ಪ್ರಸ್ತುತ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆಯಾಗಿದ್ದಾರೆ.


Share It

You cannot copy content of this page