ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಸೃಷ್ಟಿಯಾದ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 2-3 ದಿನ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣದ ಜೊತೆಗೆ ಚಳಿ ಮುಂದುವರೆದಿದೆ.
ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಮೈಸೂರು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.