ಬೆಂಗಳೂರು: ಸ್ನೇಹಿತನ ಜೊತೆ ಪಾರ್ಟಿ ಮುಗಿಸಿ ಕುಎಇದ ಮತ್ತಿನಲ್ಲಿ ಪರಸ್ಪರ ಹೊಡೆದಾಡಿಕೊಂಡಿದ್ದು, ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟಮೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.
ಹಾವೇರಿ ಜಿಲ್ಲೆಯ ಹೊಂಬರಡಿ ಗ್ರಾಮದಲ್ಲಿ ತಂದೆಯ ಅಂತ್ಯಕ್ರಿಯೆ ಮುಗಿಸಿ ಮಂಜುನಾಥ್ ಮದ್ದಿ ಸ್ನೇಹಿತ ಶಿವಕುಮಾರ್ ಜತೆಗೆ ಎಣ್ಣೆ ಹೊಡೆಯಲು ಹೋಗಿದ್ದ. ಈ ವೇಳೆ ಇವರಿಬ್ಬರ ನಡುವೆ ಜಗಳ ಆರಂಭವಾಗಿದ್ದು, ಮಾತಿಗೆ ಮಾತು ಬೆಳೆದು ಶಿವಕುಮಾರ್ ಕೋಪಗೊಂಡು ಮಂಜುನಾಥ್ ತಲೆಯ ಮೇಲೆ ಕಲ್ಲು ಎತ್ತಿಹಾಕಿದ್ದಾನೆ.
ಹಾವೇರಿ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಶಿವಕುಮಾರ್ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

