ಬೆಂಗಳೂರು: ಟಿವಿ5 ಕನ್ನಡ ವಾಹಿನಿಯ ಸಹ ಸಂಪಾದಕ ದಶರಥ್ ಸಾವೂರು ಅವರಿಗೆ ಸಾಲುಮರದ ತಿಮ್ಮಕ್ಕ ರಾಷ್ಟ್ರೀಯ ಪ್ರಶಸ್ತಿಯ ಗೌರವ ಲಭಿಸಿದೆ.
ಸಾಲುಮರದ ತಿಮ್ಮಕ್ಕ ಇಂಟರ್ನ್ಯಾಷನಲ್ ಫೌಂಡೇಶನ್ ವತಿಯಿಂದ ಕೊಡಮಾಡುವ ಈ ಪ್ರಶ್ತಸ್ತಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಸಭೆ ನಡೆದಿದ್ದು, ಸಭೆಯಲ್ಲಿ 14 ಜನರನ್ನು ವಿವಿಧ ಕ್ಷೇತ್ರಗಳ ಸಾಧಕರನ್ನು ಆಯ್ಕೆ ಮಾಡಲಾಗಿದೆ.
ಮಾಧ್ಯಮ ಕ್ಷೇತ್ರದ ಸಾಧನೆಗಾಗಿ ಟಿವಿ 5 ಸಹ ಸಂಪಾದಕ ದಶರಥ್ ಸಾವೂರು ಅವರನ್ನು ಆಯ್ಕೆ ಮಾಡಲಾಗಿದೆ. ಸೆ.18ರಂದು ನಡೆಯುವ ಸಾಲುಮರದ ತಿಮ್ಮಕ್ಕ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಸಾಹಿತ್ಯ ಕ್ಷೇತ್ರದಲ್ಲಿ ಬರಗೂರು ರಾಮಚಂದ್ರಪ್ಪ, ದಲಿತ ಹೋರಾಟಗಾರರಾದ ಮಾವಳ್ಳಿ ಶಂಕರ್, ಡಾ. ಎಂ. ವೆಂಕಟಸ್ವಾಮಿ, ಪರಿಸರ ಸಂರಕ್ಷಣೆ ಕ್ಷೇತ್ರದಲ್ಲಿ ತುಳಸಿ ಗೌಡ ಸೇರಿ ವಿವಿಧ ಕ್ಷೇತ್ರದಲ್ಲಿ14 ಜನರಿಗೆ ಪ್ರಶಸ್ತಿ ನೀಡಲಾಗುತ್ತದೆ.