ಚಿಕ್ಕಮಗಳೂರು: ಸಿ.ಟಿ. ರವಿ ಅವರಿಗೆ ಬಂದಿದೆ ಎಂಬ ಬೆದರಿಕೆ ಪತ್ರದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದು, ರವಿ ಆಪ್ತಸಹಾಯಕ ಚೇತನ್ ನನ್ನು ವಿಚಾರಣೆ ನಡೆಸಿದ್ದಾರೆ.
ಪತ್ರ ಬಂದಿರುವ ಕುರಿತು ಚೇತನ್ ಕಡೆಯಿಂದ ಮಾಹಿತಿ ಪಡೆದುಕೊಂಡಿರುವ ಪೊಲೀಸರು, ಪತ್ರ ರವಾನೆಯಾಗಿರುವ ಅಂಚೆ ಕಚೇರಿಯ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳ ಪರಿಶೀಲನೆ ನಡೆಸಿದ್ದಾರೆ.
ಜ.9 ರಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರ ಚಿಕ್ಕಮಗಳೂರಿನ ಬಸವನಹಳ್ಳಿಯ ನಿವಾಸಕ್ಕೆ ಬೆದರಿಕೆ ಪತ್ರ ಬಂದಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು, ವಿಚಾರಣೆ ಆರಂಭಿಸಿದ್ದಾರೆ.
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆಯೇ ಬೆದರಿಕೆ ಪತ್ರ ಬಂದಿದೆ ಎಂಬುದು ರವಿ ಆರೋಪವಾಗಿದ್ದು, ಆರೋಪವನ್ನು ಕಾಂಗ್ರೆಸ್ ನಾಯಕರು ನಾಟಕ ಎಂದು ವ್ಯಂಗ್ಯವಾಡಿದ್ದಾರೆ.