ಮೈಸೂರು: ಒಂದು ಧರ್ಮದ ಅವಹೇಳನ ಮಾಡುವ ರೀತಿಯ ಪೋಸ್ಟ್ ಹಾಕಿದ ಕಾರಣಕ್ಕೆ ಉಡಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ನಡೆದಿದ್ದು, ಮೈಸೂರಿನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ದೆಹಲಿಯ ಬಿಜೆಪಿ ಗೆಲುವಿನ ಬಗ್ಗೆ ಪೋಸ್ಟ್ ಹಾಕಿದ್ದಕ್ಕೆ ಆಕ್ರೋಶ ವ್ಯಕ್ತವಾಗಿತ್ತು. ಇದು ವಿಪರೀತಕ್ಕೆ ತಿರುಗಿ ಠಾಣೆಯ ಮೇಲೆ ಕಲ್ಲು ತೂರಾಟ ನಡೆದಿದೆ. ಡಿಸಿಪಿ ವಾಹನವೂ ಸೇರಿದಂತೆ ಪೊಲೀಸ್ ವಾಹನಗಳ ಮೇಲೆಯೂ ಕಲ್ಲು ತೂರಾಟ ನಡೆದಿದೆ ಎಂದು ಹೇಳಲಾಗಿದೆ.
ಎಸಿಪಿ ಗಜೇಂದ್ರ ಪ್ರಸಾದ್ ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದು, ಠಾಣೆ ಮುಂಭಾಗ ಕಲ್ಲುಗಳ ಸಂಗ್ರಹ ಮಾಡಲಾಗುತ್ತಿದೆ. ಪೌರಕಾರ್ಮಿಕರನ್ನು ಬಳಸಿ ಕಲ್ಲುಗಳನ್ನು ತೆರವು ಮಾಡಲಾಗುತ್ತಿದೆ.
ರಾತ್ರಿ ಇದ್ದಕ್ಕಿದ್ದಂತೆ ನೂರಾರು ಯುವಕರು ಜಮಾವಣೆಯಾಗಿ ಕಲ್ಲು ತೂರಾಟ ನಡೆಸಿದ್ದರು. ಹೀಗಾಗಿ, ಪೊಲೀಸರು ಅಶ್ರುವಾಯು ಸಿಡಿಸಿ ಗುಂಪನ್ನು ಚದುರಿಸುವ ಪ್ರಯತ್ನವನ್ನು ಪೊಲೀಸರು ಮಾಡಿದ್ದರು.
ಇದೀಗ ಸುರೇಶ್ ಎಂಬ ವ್ಯಕ್ತಿಯ ವಿರುದ್ಧ ಉದಯಗಿರಿ ಪೊಲಿಸ್ ಠಾಣೆಯಲ್ಲಿ ಐಫ್‌ಐಆರ್ ದಾಖಲಿಸಿದ್ದು, ಈ ಮಾಹಿತಿಯನ್ನು ಪೊಲೀಸರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊAಡಿದ್ದಾರೆ.
