ಕೊಡಗು: ಮೈಕ್ರೋ ಫೈನಾನ್ಸ್ ಕಿರುಕುಳದ ವಿರುದ್ಧ ಸರಕಾರ ಜಾರಿಗೆ ತಂದಿರುವ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿರುವ ಹೊತ್ತಿನಲ್ಲೇ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಯ ಕಿರುಕುಳಕ್ಕೆ ಮತ್ತೊಂದು ಮಹಿಳೆ ಬಲಿಯಾಗಿದ್ದಾರೆ.
ಕೊಡಗು ಜಿಲ್ಲೆಯ ಸೋಮವಾರಪೇಟೆಯ ಶನಿವಾರಸಂತೆ ಗ್ರಾಮದ ಹಸೀನಾ ಎಂಬ 42 ವರ್ಷದ ಮಹಿಳೆ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ. ಮಹಿಳೆಗೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕರೆ ಮಾಡಿ ಬೆದರಿಕೆ ಹಾಕಿದ್ದರು ಎಂಬ ಆರೋಪ ಕುಟುಂಬಸ್ಥರಿAದ ಕೇಳಿಬಂದಿದೆ.
ಈ ಸಂಬAಧ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.