ಬೆಂಗಳೂರು: ಮಾಜಿ ಸಚಿವ ಆನಂದ್ ಸಿಂಗ್ ವಿರುದ್ಧದ ಅಕ್ರಮ ಅದಿರು ಗಣಿಗಾರಿಕೆ ಪ್ರಕರಣಕ್ಕೆ ಸಂಬAಧಿಸಿದAತೆ ಅಂತಿಮ ತೀರ್ಪು ಫೆಬ್ರವರಿ 24 ಕ್ಕೆ ಪ್ರಕಟವಾಗಲಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಕರಣದ ವಿಚಾರಣೆ ನಡೆಸಿದ್ದು, ತೀರ್ಪು ಕಾಯ್ದಿರಿಸಿದೆ. ನ್ಯಾಯಮೂರ್ತಿ ಸಂತೋಷ್ ಗಜಾನನ್ ಭಟ್ ಅವರ ಏಕಸದಸ್ಯ ಪೀಠದ ಮುಂದೆ ಪ್ರಕರಣದ ಸುದೀರ್ಘ ವಿಚಾರನೆ ನಡೆಸಿದ್ದು, ತೀರ್ಪು ಪ್ರಕಟಿಸುವ ದಿನಾಂಕವನ್ನು ಫೆ.24ಕ್ಕೆ ಮುಂದೂಡಿದೆ.
ಆನಂದ್ ಸಿಂಗ್ ವಿರುದ್ಧ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. ಸಿವಿಸಿ ವರದಿಯಲ್ಲಿ ಉಲ್ಲೇಖವಾದ ಅಂಶಗಳಲ್ಲಿ ಮೇಲ್ನೋಟಕ್ಕೆ ಅಕ್ರಮ ನಡೆದಿರುವುದನ್ನು ಉಲ್ಲೇಖಿಸಿ ಸುಪ್ರೀಂ ಕೋರ್ಟ್ ಈ ಆದೇಶ ನೀಡಿತ್ತು.
ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ ತನಿಖೆ ನಡೆಸಿದ್ದು,. 2015 ರಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ 16.976 ಮೆಟ್ರಿಕ್ ಟನ್ ಅದಿರು ಅಕ್ರಮ ಗಣಿಗಾರಿಕೆ ಮತ್ತು ಜೈಸಿಂಗ್‌ಪುರದ ಸ್‌ವಿಕೆ ಫ್ಲಾಟ್‌ನಲ್ಲಿ ಅಕ್ರಮ ಗಣಿಗಾರಿಕೆ ಆರೋಪದಲ್ಲಿ ಆರೋಪಪಟ್ಟಿ ಸಲ್ಲಿಕೆ ಮಾಡಲಾಗಿತ್ತು.
ಲೋಕಾಯುಕ್ತ ಡಿವೈಎಸ್‌ಪಿ ವೇಣುಗೋಪಾಲ್ ನೇತೃತ್ವದ ತಂಡ ತನಿಖೆ ನಡೆಸಿ ಚಾರ್ಜ್ಶೀಟ್ ಸಲ್ಲಿಸಿದ್ದು, ಪ್ರಕರಣದ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ ತೀರ್ಪು ಪ್ರಕಟಿಸುವ ದಿನಾಂಕ ನಿಗದಿ ಮಾಡಿದೆ.
