ಬೆಂಗಳೂರು: ಕರ್ನಾಟಕ ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಮಾಜಿ ಶಾಸಕಿ ಸೌಮ್ಯ ರೆಡ್ಡಿ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.
ಎಐಸಿಸಿ ಹೊರಡಿಸಿರುವ ಆದೇಶದಲ್ಲಿ ಮೂರು ರಾಜ್ಯಗಳ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆಯರ ನೇಮಕ ಮಾಡಿ ಆದೇಶ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ.
ಅರುಣಾಚಲ ಪ್ರದೇಶ ಮಹಿಳಾ ಘಟಕಕ್ಕೆ ಚುಕು ನಾಚಿ, ಚಂಡೀಗಢ ಘಟಕಕ್ಕೆ ನಂದಿತಾ ಹೂಡಾ ಮತ್ತು ಕರ್ನಾಟಕದ ಮಹಿಳಾ ಕಾಂಗ್ರೆಸ್ ಘಟಕಕ್ಕೆ ಸೌಮ್ಯ ರೆಡ್ಡಿ ಅವರನ್ನು ನೇಮಿಸಲಾಗಿದೆ.
ಸೌಮ್ಯಾ ರೆಡ್ಡಿ ಕರ್ನಾಟಕ ಕಾಂಗ್ರೆಸ್ ನ ಪ್ರಭಾವಿ ನಾಯಕ, ಸಚಿವ ರಾಮಲಿಂಗಾ ರೆಡ್ಡಿ ಅವರ ಪುತ್ರಿಯಾಗಿದ್ದು, ಜಯನಗರದ ಮಾಜಿ ಶಾಸಕಿಯೂ ಆಗಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿದ್ದರು.
ವಿಧಾನಸಭಾ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ವಿವಾದಾತ್ಮಕ ಫಲಿತಾಂಶದಲ್ಲಿ ಸೋತಿದ್ದ ಸೌಮ್ಯ ರೆಡ್ಡಿ ಅವರಿಗೆ, ಕಾಂಗ್ರೆಸ್ ಬಂಪರ್ ಕೊಡುಗೆಯನ್ನೇ ನೀಡಿದೆ ಎನ್ನಬಹುದು.
updating….