ದುಬೈ: ದುಬೈನ ಇಂಟರ್ ನ್ಯಾಶನಲ್ ಸ್ಟೇಡಿಯಂನಲ್ಲಿ ಆರಂಭವಾಗುತ್ತಿರುವ ಚಾಂಪಿಯನ್ಸ್ ಕ್ರಿಕೆಟ್ ಟ್ರೋಫಿ-2025 ರ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಮೊದಲು ಬ್ಯಾಟಿಂಗ್ ಆರಿಸಿಕೊಂಡಿದೆ.
ನ್ಯೂಜಿಲೆಂಡ್ ತಂಡದ ನಾಯಕ ಮೈಕಲ್ ಸ್ಯಾಂಟ್ನರ್ ಅವರು ಮೊದಲು ಬ್ಯಾಟಿಂಗ್ ಮಾಡಿ 270 ರನ್ ಗಳಿಗಿಂತ ಹೆಚ್ಚಿನ ಸ್ಕೋರ್ ಗಳಿಸಿದರೆ ಟಾರ್ಗೆಟ್ ಚೇಸ್ ಮಾಡುವ ಟೀಂ ಇಂಡಿಯಾ ತುಸು ಕಷ್ಟಪಡಬೇಕಾಗುತ್ತದೆ ಎಂಬುದು ಕ್ರಿಕೆಟ್ ವಿಶ್ಲೇಷಕರ ಅಭಿಪ್ರಾಯವಾಗಿದೆ.
ಇನ್ನು ಎರಡೂ ತಂಡಗಳು ಹಿಂದಿನ ಸೆಮಿಫೈನಲ್ ಪಂದ್ಯದಲ್ಲಿ ಆಡಿದ ತಂಡವನ್ನೇ ಕಣಕ್ಕಿಳಿಸಿವೆ.
ಹೀಗಾಗಿ ಟೀಂ ಇಂಡಿಯಾದ ಪ್ರಮುಖ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಮೊಣಕಾಲು ಗಾಯದಿಂದ ಚೇತರಿಸಿಕೊಂಡು ಇಂದಿನ ಫೈನಲ್ ಪಂದ್ಯದಲ್ಲಿ ಆಡುವುದು ಖಚಿತವಾಗಿದೆ.
ನ್ಯೂಜಿಲೆಂಡ್ ಬ್ಯಾಟಿಂಗ್ ಕ್ರಮಾಂಕ ಬಲಿಷ್ಠವಾಗಿದೆ. ಆದರೆ ಟೀಂ ಇಂಡಿಯಾ ಹೊಸ ಮ್ಯಾಚ್ ವಿನ್ನರ್ ಲೆಗ್ ಸ್ಪಿನ್ನರ್ ಎಂದು ಕರೆಯಲ್ಪಡುವ ವರುಣ್ ಚಕ್ರವರ್ತಿ ಅವರನ್ನು ನೆಚ್ಚಿಕೊಂಡಿದೆ.