ಕೊಪ್ಪಳ : ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಬೆಂಗಾವಲು ವಾಹನಕ್ಕೆ ಎದರಾಗಿ ಕಾರು ಚಾಲನೆ ಮಾಡಿದ್ದ ಶಾಸಕ ಜನಾರ್ದನ ರೆಡ್ಡಿ ಅವರ ಕಾರು ಚಾಲಕನ (Car Driver) ವಿರುದ್ಧ ದೂರು ದಾಖಲಾಗಿದೆ.
ಶನಿವಾರ ರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಬೆಂಗಾವಲು ವಾಹನಕ್ಕೆ ಎದರಾಗಿ ಕಾರು ಚಾಲನೆ ಮಾಡಿದ್ದರು. ಈ ವೇಳೆ ಕರ್ತವ್ಯದಲ್ಲಿದ್ದ ಪೊಲೀಸರು ಚಾಲಕನ ವಿರುದ್ಧ ದೂರು ನೀಡಿದ್ದರು. ಹೀಗಾಗಿ, ಗಂಗಾವತಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಝೀರೋ ಟ್ರಾಫಿಕ್ ಕಾನೂನು ಉಲ್ಲಂಘನೆ ಪ್ರಕರಣ ದಾಖಲಾಗಿದೆ.
ಶನಿವಾರ ರಾಯಚೂರು ಕಾರ್ಯಕ್ರಮ ಮುಗಿಸಿಕೊಂಡು ಕೊಪ್ಪಳ ಜಿಲ್ಲೆಯ ಗಂಗಾವತಿ ಮಾರ್ಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಳ್ಳಾರಿಯ ಜಿಂದಾಲ್ ವಿಮಾನ ನಿಲ್ದಾಣಕ್ಕೆ ಹೋಗುತ್ತಿದ್ದರು. ಹೀಗಾಗಿ ಗಂಗಾವತಿಯಲ್ಲಿ 20ಕ್ಕೂ ಹೆಚ್ಚು ನಿಮಿಷ, ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು.
ಗಂಗಾವತಿ ನಗರದ ಸಿಬಿಎಸ್ ಸರ್ಕಲ್ನಲ್ಲಿ ಶಾಸಕ ಜನಾರ್ದನ ರೆಡ್ಡಿ ಕೂಡಾ ಸಿಲುಕ್ಕಿದ್ದರು. ಬಹಳ ಹೊತ್ತಾದರೂ ಕೂಡಾ ವಾಹನ ಸಂಚಾರಕ್ಕೆ ಅವಕಾಶ ನೀಡದೆ ಇದ್ದಿದ್ದರಿಂದ ರೋಡ್ನ ಡಿವೈಡರ್ ಮೂಲಕ ಜನಾರ್ದನ್ ರೆಡ್ಡಿ ಕಾರು ಚಾಲಕ, ಕಾನ್ವೇ ವಿರುದ್ದ ದಿಕ್ಕಿನಲ್ಲಿ ಕಾರು ಚಲಾಯಿಸಿಕೊಂಡು ಹೋಗಿದ್ದಾರೆ. ಇದಕ್ಕೆ ಸಚಿವ ಶಿವರಾಜ್ ತಂಗಡಗಿ ಸೇರಿದಂತೆ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.