ರಾಜಕೀಯ ಸುದ್ದಿ

ತಮಿಳುನಾಡು ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ಪ್ರಮಾಣವಚನ

Share It

ಬೆಂಗಳೂರು: ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ತಮಿಳುನಾಡು ಉಪಮುಖ್ಯಮಂತ್ರಿಯಾಗಿ ಸೋಮವಾರ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.

ಸೋಮವಾರ ಮಧ್ಯಾಹ್ನ 3.30 ಕ್ಕೆ ನಡೆಯುವ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಉದಯನಿಧಿ ಮಾರನ್ ಜತೆಗೆ ವಿ.ಸೆಂಥಿಲ್ ಬಾಲಾಜಿ, ಡಾ. ಗೋವಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.

ಉದಯನಿಧಿ ಸ್ಟಾಲಿನ್, ಯುವ ಕಲ್ಯಾಣ ಮತ್ತು ಕ್ರೀಡಾ ಅಭಿವೃದ್ಧಿ ಸಚಿವರಾಗಿದ್ದರು. ಇದೀಗ ಉಪಮುಖ್ಯಮಂತ್ರಿಯಾಗುತ್ತಿದ್ದAತೆ ಹೆಚ್ಚುವರಿಯಾಗಿ ಯೋಜನೆ ಮತ್ತು ಅಭಿವೃದ್ಧಿ ಖಾತೆ ಹಂಚಿಕೆ ಮಾಡಲಾಗಿದೆ.

ಉದಯನಿಧಿ ಸ್ಟಾಲಿನ್ ಇತ್ತೀಚೆಗೆ ಸನಾತನ ಧರ್ಮದ ಬಗ್ಗೆ ಮಾತನಾಡಿ ವಿವಾದಕ್ಕೆ ಕಾರಣವಾಗಿದ್ದರು. ಅವರ ವಿರುದ್ಧ ಬೆಂಗಳೂರಿನಲ್ಲಿ ಪ್ರಕರಣ ಕೂಡ ದಾಖಲಾಗಿದ್ದು, ಖುದ್ದು ಹಾಜರಾಗಿ ಜಾಮೀನು ಪಡೆದುಕೊಂಡಿದ್ದರು.


Share It

You cannot copy content of this page