ಚಾಲಕನ ನಿರ್ಲಕ್ಷ್ಯ : ಸ್ಕೂಟಿಗೆ ಡಿಕ್ಕಿ ಹೊಡೆದ ಲಾರಿ, ಮಹಿಳೆ ಗಂಭೀರ ಗಾಯ
ಬಳ್ಳಾರಿ: ಚಾಲಕನ ನಿರ್ಲಕ್ಷ್ಯದಿಂದ ಲಾರಿಯೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಓಡಿಸುತ್ತಿದ್ದ ಲಕ್ಷ್ಮೀ ಎಂಬುವವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
ಬಳ್ಳಾರಿ-ಬೆಳಗಲ್ ರಸ್ತೆಯಲ್ಲಿ ಘಟನೆ ನಡೆದಿದ್ದು, ಅಪಘಾತಕ್ಕೆ ಚಾಲಕನ ನಿರ್ಲಕ್ಷö್ಯವೇ ಕಾರಣ ಎನ್ನಲಾಗಿದೆ. ಇದಕ್ಕೆ ಸಂಬAಧಿಸಿದAತೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಚಾಲಕನ ಬಂಧನಕ್ಕೆ ಪಟ್ಟುಹಿಡಿದ್ದಾರೆ.
ಸ್ಕೂಟಿಯಲ್ಲಿ ತಾಯಿ ಮತ್ತು ಮಗಳು ಪ್ರಯಾಣಿಸುತ್ತಿದ್ದು, ತಾಯಿಯ ಸ್ಥಿತಿ ಗಂಭೀರವಾಗಿದೆ. ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆಯಾದರೂ, ವೈದ್ಯರು ಪರಿಸ್ಥಿತಿಯ ಬಗ್ಗೆ ಯಾವುದೇ ಭರವಸೆ ನೀಡಿಲ್ಲ, ಹೀಗಾಗಿ, ಕುಟುಂಬಸ್ಥರು ಆಕ್ರೋಶಗೊಂಡಿದ್ದಾರೆ.


