ಸುದ್ದಿ

ಉಪಚುನಾವಣೆ: ಯೋಗೇಶ್ವರ್, ವೈಶಾಲಿ ಕುಲಕರ್ಣಿ, ಅನ್ನಪೂರ್ಣ ತುಕಾರಾಂಗೆ ಟಿಕೆಟ್ ಘೋಷಣೆ

Share It

ಬೆಂಗಳೂರು:ಉಪಚುನಾವಣೆಯ ಮೂರು ಕ್ಷೇತ್ರಗಳಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದ್ದು, ಇಬ್ಬರು ಮಹಿಳೆಯರಿಗೆ ಟಿಕೆಟ್ ನೀಡಿದೆ.

ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರಕ್ಕೆ ನಿರೀಕ್ಷೆಯಂತೆ ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿರುವ ಸಿ.ಪಿ.ಯೋಗೇಶ್ವರ್ ಅವರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಿದ್ದರೆ, ಸಂಡೂರು ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸಂಸದ ಇ.ತುಕಾರಾಂ ಅವರ ಪತ್ನಿ ಅನ್ನಪೂರ್ಣ ತುಕಾರಾಂ ಅವರನ್ನು ಘೋಷಿಸಲಾಗಿದೆ. ಶಿಗ್ಗಾವಿ ಕ್ಷೇತ್ರಕ್ಕೆ ವೈಶಾಲಿ ಕುಲಕರ್ಣಿ ಅವರಿಗೆ ಟಿಕೆಟ್ ನೀಡಲಾಗಿದೆ.

ಮೂರು ಕ್ಷೇತ್ರಗಳ ಅಭ್ಯರ್ಥಿಗಳನ್ನು ಒಂದೇ ಬಾರಿಗೆ ಬಿಡುಗಡೆ ಮಾಡಿರುವ ಕಾಂಗ್ರೆಸ್ ಹೈಕಮಾಂಡ್ ಇಬ್ಬರು ಮಹಿಳೆಯರಿಗೆ ಟಿಕೆಟ್ ನೀಡಿರುವುದು ವಿಶೇಷ. ಬಿಜೆಪಿಯಿಂದ ಶಿಗ್ಗಾವಿಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ, ಸಂಡೂರು ಕ್ಷೇತ್ರಕ್ಕೆ ಬಂಗಾರು ಹನುಮಂತು ಅವರನ್ನು ಕಣಕ್ಕಿಳಿಸಿದೆ. ಈ ಎರಡು ಕ್ಷೇತ್ರಕ್ಕೆ ಕಾಂಗ್ರೆಸ್ ಮಹಿಳೆಯರನ್ನು ಕಣಕ್ಕಿಳಿಸಿರುವುದು ವಿಶೇಷ.

ಇನ್ನೂ ಚನ್ನಪಟ್ಟಣದಲ್ಲಿ ಮೈತ್ರಿ ಅಭ್ಯರ್ಥಿ ಯಾರು ಎಂಬ ಬಗ್ಗೆ ಇನ್ನೂ ಗೊಂದಲ ಮುಂದುವರಿದಿದೆ. ಜೆಡಿಎಸ್‌ಗೆ ಅಭ್ಯರ್ಥಿ ಘೋಷಣೆಯ ಹೊಣೆಯನ್ನು ನೀಡಿದ್ದು, ಇನ್ನೂ ಅಂತಿಮವಾಗಿಲ್ಲ. ಕಾಂಗ್ರೆಸ್ ಸಿ.ಪಿ.ಯೋಗೇಶ್ವರ್‌ಗೆ ಟಿಕೆಟ್ ಪೈನಲ್ ಮಾಡಿದೆ.


Share It

You cannot copy content of this page