ರಾಜಕೀಯ ಸಿನಿಮಾ ಸುದ್ದಿ

ಜಾತಿನಿಂದನೆ ಪ್ರಕರಣ: ಬಿಜೆಪಿ ಶಾಸಕ ಮುನಿರತ್ನಗೆ 14 ದಿನ ಜೈಲು ವಾಸ ಫಿಕ್ಸ್

Share It

ಬೆಂಗಳೂರು: ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಪ್ರಕರಣದಲ್ಲಿ ಬಂಧಿತರಾಗಿರುವ ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದ್ದು, 14 ದಿನ ಜೈಲು ವಾಸ ಪಿಕ್ಸ್ ಎಂಬAತಾಗಿದೆ.

ಎರಡು ದಿನಗಳ ನ್ಯಾಯಾಂಗ ಬಂಧನ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಮುನಿರತ್ನ ಅವರನ್ನು ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ ಆದೇಶದ ಹಿನ್ನೆಲೆಯಲ್ಲಿ ಮುನಿರತ್ನ ಪರಪ್ಪನ ಅಗ್ರಹಾರ ಜೈಲಿಗೆ ಹೋಗುವುದು ಖಚಿತವಾಗಿದೆ.

ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸಂಬAಧ ವಾದ ಮಂಡಿಸಿದ ಮುನಿರತ್ನ ಪರ ವಕೀಲ ಅಶೋಕ ಹಾರನಹಳ್ಳಿ, ರಿಮ್ಯಾಂಡ್ ಅರ್ಜಿಯನ್ನ ಆರೋಪಿ ಪರ ವಕೀಲರಿಗೆ ನೀಡಬೇಕೆಂದು ಸುಪ್ರೀಂಕೋರ್ಟ್ ಆದೇಶವಿದ್ದರೂ ತನಿಖಾಧಿಕಾರಿಗಳು ರಿಮ್ಯಾಂಡ್ ಅರ್ಜಿ ನೀಡಿಲ್ಲ. ಮುನಿರತ್ನ ವಿರುದ್ಧ ಜಾತಿ ನಿಂದನೆ ಹಾಗೂ ಜೀವ ಬೆದರಿಕೆಯಡಿ ಸೆ.13ರ ರಾತ್ರಿ ಪ್ರತ್ಯೇಕ ಎಫ್‌ಐಆರ್ ದಾಖಲಾಗಿವೆ.

ದೂರು ಬರುತ್ತಿದ್ದಂತೆ ಪ್ರಕರಣ ದಾಖಲಿಸಿಕೊಂಡು ಯಾವುದೇ ವಿಚಾರಣೆ ಮಾಡದೇ ಏಕಾಏಕಿ ಪೊಲೀಸರು ಬಂಧಿಸಿದ್ದಾರೆ ಎಂದರು, ಇದಕ್ಕೂ ಮುನ್ನ ಜಾಮೀನು ಅರ್ಜಿಗೆ ಸರ್ಕಾರಿ ಪರ ವಕೀಲರು ಆಕ್ಷೇಪಣೆ ವ್ಯಕ್ತಪಡಿಸಿದರು. ಆಕ್ಷೇಪಣೆ ಸಲ್ಲಿಸಲು ಒಂದು ದಿನ ಕಾಲಾವಕಾಶ ಕೇಳಿದರು. ಇದೇ ವೇಳೆ ದೂರುದಾರ ಪರ ವಕೀಲರು ನಾಳೆ ಆಕ್ಷೇಪಣೆ ಸಲ್ಲಿಸುವುದಾಗಿ ತಿಳಿಸಿದರು.

14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ನಾಳೆಗೆ ಮುಂದೂಡಿದರು. ನಾಳೆ ಒಂದು ವೇಳೆ ನಿರೀಕ್ಷಣಾ ಜಾಮೀನು ದೊರಕಿದ್ದೇ ಆದರೆ, ಮುನಿರತ್ನ ಜೈಲುವಾಸ ತಪ್ಪಲಿದೆ. ಇಲ್ಲವಾದಲ್ಲಿ, 14 ದಿನಗಳ ಕಾಲ ಪರಪ್ಪನ ಅಗ್ರಹಾರ ಜೈಲಿನಲ್ಲೇ ಕಳೆಯಬೇಕಾಗಿದೆ.


Share It

You cannot copy content of this page