ಸಿಲಿಂಡರ್ ಸೋರಿಕೆಯಿಂದ ಸ್ಫೋಟ: ಮೂವರ ಸ್ಥಿತಿ ಗಂಭೀರ
ಹುಬ್ಬಳ್ಳಿ: ಅಡುಗೆ ಅನಿಲದ ಸಿಲಿಂಡರ್ ಸ್ಫೋಟಗೊಂಡು ರಾಜಸ್ಥಾನದ ಮೂವರು ವ್ಯಕ್ತಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹುಬ್ಬಳ್ಳಿಯ ಗಾಮನಗಟ್ಟಿ ಕೈಗಾರಿಕಾ ಪ್ರದೇಶದಲ್ಲಿ ವಾಸವಿದ್ದ ರಾಜಸ್ಥಾನದ ಜೋಧ್ಪುರ ಮೂಲದ ಅಶೋಕ್, ಮಂಗೀಲಾಲ್ ಮತ್ತು ಇನ್ನೊಬ್ಬ ವ್ಯಕ್ತಿಗೆ ಶೇ. 50 ಕ್ಕಿಂತ ಹೆಚ್ಚು ಸುಟ್ಟ ಗಾಯಗಳಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ.
ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದು, ಆಸ್ಪತ್ರೆಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾದ ಶಶಿಕುಮಾರ್ ಭೇಟಿ ನೀಡಿ, ಘಟನೆಯ ವಿವರ ಪಡೆದುಕೊಂಡಿದ್ದಾರೆ.
ಗಾಯಾಳುಗಳಿಗೆ ತೀವ್ರಾ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಶೇ.50 ರಷ್ಟು ಸುಟ್ಟ ಗಾಯಗಳಾಗಿವೆ. ಅಡುಗೆ ಮಾಡುವಾಗ ಗ್ಯಾಸ್ ಸೋರಿಕೆಯಾಗಿ ಸಿಲೀಂಡರ್ ಸ್ಫೋಟವಾಗಿದೆ ಎಂದು ಶಶಿಕುಮಾರ್ ತಿಳಿಸಿದ್ದಾರೆ.


