ಬೆಂಗಳೂರು: ಕಾಂಗ್ರೆಸ್ ರಾಷ್ಟಿçÃಯ ನಾಯಕಿ ಸೋನಿಯಾ ಗಾಂಧಿ ಅವರ ಮಾರ್ಪ್ ಮಾಡಿದ ಪೋಟೋ ಬಳಸಿ ಅವಹೇಳನ ಮಾಡಿದ ಆರೋಪದಲ್ಲಿ ಸಾಮಾಜಿಕ ಜಾಲತಾಣ ಸಂಸ್ಥೆಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ಬೆಂಗಳೂರಿನ ಸೆಂಟ್ರಲ್ ಸೆನ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದು, ಕಾಮೋಲಿಕ ಎಂಬ ಗುಜರಾತ್ ಮೂಲದ ಜಾಲತಾಣ ಸಂಸ್ಥೆಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಮಾರ್ಪ್ ಮಾಡಿದ ಫೋಟೋವನ್ನು ಬಳಸಿ ಸೋನಿಯಾ ಗಾಂಧಿ ಅವರನ್ನು ಅವಹೇಳನ ಮಾಡಲು ಸಂಸ್ಥೆ ಪ್ರಯತ್ನ ಮಾಡಿತ್ತು ಎಂದು ಆರೋಪಿಸಿ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.