ಬೆಂಗಳೂರು: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಯುವಕರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮಲ್ಕಿ ತಾಲೂಕಿನ ಕಿನ್ನಿಗೋಳಿ ಬಟ್ಟಕೋಡಿ ಬಳಿ ಘಟನೆ ನಡೆದಿದ್ದು, ಬೈಕ್‌ನಲ್ಲಿ ಬರುತ್ತಿದ್ದ ಇಬ್ಬರು ಯುವಕರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾರೆ.
ಪರಿಣಾಮದಿಂದಾಗಿ ಬೈಕ್‌ನಲ್ಲಿದ್ದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಮೃತ ಯುವಕರನ್ನು ಆತ್ಮಾನಂದ ಮತ್ತು ನವೀನ್ ಹೂಗಾರ್ ಎಂದು ಗುರುತಿಸಲಾಗಿದೆ. ಮೃತರು ಧಾರವಾಡ ಜಿಲ್ಲೆಯ ಕಲ್ಲೂರಿನ ನಿವಾಸಿಗಳು ಎಂದು ಹೇಳಲಾಗಿದೆ. ಮಂಗಳೂರು ಉತ್ತರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರಣೆ ಮುಂದುವರಿದಿದೆ.